ಬಸವೇಶ್ವರ ಜಯಂತಿ ನಿಮಿತ್ತ ಪಾದಯಾತ್ರೆ
Walk on the occasion of Basaveshwara Jayanti
ಬೆಂಗಳೂರು 15: ಸಮಾನತೆಯ ಹರಿಕಾರ, ಕರ್ನಾಟಕದ ಸಾಂಸ್ಕೃತಿಕ ನಾಯಕ ಮಹಾತ್ಮ ಬಸವೇಶ್ವರ ಅವರ ಜಯಂತಿ ನಿಮಿತ್ತ ಅವರ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಪಾದಯಾತ್ರೆ ಮತ್ತು 50ಕಿ.ಮೀ ಓಟವನ್ನು ಈ ವರ್ಷ ಬಾರಿ ವಿಶಿಷ್ಟವಾಗಿ ಆಯೋಜಿಸಲಾಗಿದೆ ಎಂದು ಆಯೋಜಕ ಬಿ. ಬಿ. ಪಾಟೀಲ ತಿಳಿಸಿದ್ದಾರೆ.ಸಮಾನತೆಯ ಸಂಕೇತವಾಗಿರುವ ಬಸವಾದಿ ಶರಣರ ವಿಚಾರಗಳನ್ನು ಅಳವಡಿಸಿಕೊಳ್ಳುವುದು ಮತ್ತು ಎಲ್ಲ ಜೀವಿಗಳ ಮೇಲೆ ದಯೆ ತೋರುವುದು. ’ಕಾಯಕವೇ ಕೈಲಾಸ’ ಮತ್ತು ’ದಾಸೋಹ’ ತತ್ವಗಳನ್ನು ಮುನ್ನಡೆಸುವುದೇ ಬಸವ ಜ್ಯೋತಿ ಯಾತ್ರೆಯ ಉದ್ದೇಶವಾಗಿದೆ.ವಿಜಯಪುರ ಜಿಲ್ಲೆಯ ಹಂದಿನಗೂರು ಗ್ರಾಮದ ಬಿ.ಬಿ.ಪಾಟೀಲ ಅವರು ಕಳೆದ 40 ವರ್ಷಗಳಿಂದ ಬೆಂಗಳೂರಿನಲ್ಲಿ ತಂತ್ರಜ್ಞರಾಗಿದ್ದು, ಜೊತೆಗೆ ಬಸವಾದಿ ಶರಣರ ತತ್ವ ಪ್ರಸಾರ ಕಾರ್ಯದಲ್ಲಿ ತೊಡಗಿದ್ದಾರೆ. 2012 ರಿಂದ ಪ್ರತಿ ವರ್ಷ ಬಸವ ಜಯಂತಿಯಂದು ಬಸವಣ್ಣನವರ ಜನ್ಮಸ್ಥಳ ಬಸವನ ಬಾಗೇವಾಡಿಯಿಂದ ವಿಜಯಪುರದ ಬಸವೇಶ್ವರ ವೃತ್ತದವರೆಗೆ ಓಟದ ಮೂಲಕ ’ಬಸವ ಜ್ಯೋತಿ’ಯನ್ನು ತರುವ ಕಾರ್ಯ ಮಾಡುತ್ತಿದ್ದು, ಈ ಬಾರಿ ವಿಜಯಪುರ ಸೈಕ್ಲಿಂಗ್ ಗ್ರುಪ್ ಇವರೊಂದಿಗೆ ಕೈಜೊಡಿಸಿದ್ದು, ಈಗಾಗಲೇ 100ಕ್ಕೂ ಹೆಚ್ಚು ಜನ ಈ ಯಾತ್ರೆಯಲ್ಲಿ ನೋಂದಣಿ ಮಾಡಿಕೊಂಡಿದ್ದಾರೆ.
ದಿ.19 ರವಿವಾರ ಸಂ.7ಗಂ. ಬಸವನ ಬಾಗೇವಾಡಿಯಿಂದ ಆರಂಭಗೊಳ್ಳುವ ಈ ಯಾತ್ರೆ ಮಸಬಿನಾಳ, ಉಕ್ಕಲಿ, ಉಕುಮನಾಳ ಮಾರ್ಗವಾಗಿ ದಿ.20 ಸೋಮವಾರ ಬೆ.7ಗಂ. ಶಿವಗಿರಿ ಮೂಲಕ ಒಟ್ಟು 50 ಕಿ.ಮೀ ಸಂಚರಿಸಿ, ವಿಜಯಪುರ ನಗರದ ಬಸವೇಶ್ವರ ವೃತ್ತದಲ್ಲಿ ಯಾತ್ರೆ ಮುಕ್ತಾಯಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಸವಜ್ಯೋತಿ ಯಾತ್ರೆಗೆ ನಿರಂತರ ಸಹಾಯ ಮತ್ತು ಸಹಕಾರ ನೀಡುತ್ತಿರುವ ಜಿಲ್ಲಾ ಉಸ್ತುವಾರಿ ಹಾಗೂ ಕೈಗಾರಿಕೆ ಸಚಿವ ಡಾ. ಎಂ. ಬಿ. ಪಾಟೀಲ, ಬಸವನ ಬಾಗೇವಾಡಿ ಶಾಸಕ, ಸಚಿವ ಶಿವಾನಂದ ಪಾಟೀಲ, ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ವಿಜಯಪುರದ ನಾಗರಿಕರು ಈ ಬಸವ ಜ್ಯೋತಿಯನ್ನು ಸ್ವಾಗತಿಸಲಿದ್ದಾರೆ. ವಿಶಿಷ್ಟ ಮತ್ತು ಓಟದಲ್ಲಿ ಪಾಲ್ಗೊಳ್ಳುವವರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 