ಸಮಸ್ಯೆ ಬಗೆಹರಿಸದಿದ್ದರೆ ಮಹಾರಾಷ್ಟ್ರ ಸೇರೆ್ಡಗೆ ಮನವಿ ಸಲ್ಲಿಸುವ ಎಚ್ಚರಿಕೆ
Warning to submit a request to join Maharashtra if the issue is not resolved
ಗಡಿ ಭಾಗದ ರಸ್ತೆ ಅಭಿವೃದ್ಧಿಗೆ ಆಗ್ರಹ
ಸಂಬರಗಿ, ಆ. 3: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಕರ್ನಾಟಕ-ಮಹಾರಾಷ್ಟ್ರ ಗಡಿ ಭಾಗದ ರಸ್ತೆ ಅಭಿವೃದ್ಧಿ ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಆರೋಪಿಸಿ, ಸರ್ಕಾರ ತಕ್ಷಣ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸೈನಿಕ ಹಾಗೂ ರೈತ ಹೋರಾಟಗಾರ ಸಚಿನ್ ಪಾಟೀಲ ಆಗ್ರಹಿಸಿದರು.
ಭಾನುವಾರ ಪಾಂಡೇಗಾಂವ್-ಕೊಂಗನೋಳಿ ರಸ್ತೆಯ ದುಸ್ಥಿತಿಯನ್ನು ಖಂಡಿಸಿ ನಡೆಸಿದ ಮೌನ ಪ್ರತಿಭಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ರಸ್ತೆ ದುರಸ್ತಿಗೆ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗಡಿ ಭಾಗದ ಜನರು ಮೂಲಸೌಕರ್ಯಗಳ ಕೊರತೆಯಿಂದ ಸಂಕಷ್ಟ ಅನುಭವಿಸುತ್ತಿದ್ದು, ರಸ್ತೆಗಳ ದುಸ್ಥಿತಿಯಿಂದ ತುರ್ತು ವೈದ್ಯಕೀಯ ಸೇವೆಗಳಿಗೂ ತೊಂದರೆಯಾಗುತ್ತಿದೆ. ಆಂಬ್ಯುಲೆನ್ಸ್ ಸಂಚಾರವೂ ಕಷ್ಟಕರವಾಗಿದ್ದು, ರೋಗಿಗಳ ಜೀವಕ್ಕೂ ಅಪಾಯ ಉಂಟಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಹೇಳಿದರು.
ಗಡಿ ಪ್ರದೇಶದ ಅಭಿವೃದ್ಧಿಯನ್ನು ಸರ್ಕಾರ ನಿರ್ಲಕ್ಷ್ಯ ಮಾಡುತ್ತಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ತಮ್ಮ ಅಹವಾಲು ಸಲ್ಲಿಸುವುದಾಗಿ ತಿಳಿಸಿದರು.
ರಾಜ್ಯ ಸರ್ಕಾರ ಗಡಿ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಸಾಧ್ಯವಾಗದಿದ್ದರೆ, ತಮ್ಮ ಗ್ರಾಮವನ್ನು ಮಹಾರಾಷ್ಟ್ರಕ್ಕೆ ಸೇರೆ್ಡಗೊಳಿಸುವಂತೆ ಮನವಿ ಸಲ್ಲಿಸುವ ಅನಿವಾರ್ಯತೆ ಎದುರಾಗಬಹುದು ಎಂದು ಎಚ್ಚರಿಸಿದರು.
ಪಾಂಡೇಗಾಂವ್ ಹಿ ಚಾಬುಕ್ಸಾ-್ವರವಾಡಿ ರಸ್ತೆ ಕಾಮಗಾರಿಗೆ ಒಂದು ವರ್ಷದ ಹಿಂದೆಯೇ ಅನುಮೋದನೆ ದೊರೆತಿದ್ದರೂ, ಇದುವರೆಗೆ ಯಾವುದೇ ಕಾಮಗಾರಿ ಆರಂಭವಾಗಿಲ್ಲ ಎಂದು ಆರೋಪಿಸಿದ ಅವರು, ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ರಸ್ತೆ ಕಾಮಗಾರಿ ತಕ್ಷಣ ಆರಂಭಿಸಬೇಕು.
ಇಲ್ಲವಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕಾಕಾಸಾಹೇಬ್ ಪಾಟೀಲ, ಸಾಗರ ಪಾಟೀಲ, ಶ್ರೀಮಂತ ಪಾಟೀಲ ಸೇರಿದಂತೆ ಹಲವರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 