ತ್ಯಾಜ್ಯ ಸಾಗಾಟದ ಟ್ತ್ಯಕ್ಟರ್, ಮಿನಿ ಟಿಪ್ಪರ್ ಲೋಕಾರ್ಪಣೆ ಮಾಡಿದ: ಸಚಿವ ಎಚ್ ಕೆ ಪಾಟೀಲ
Waste transportation tractor, mini tipper unveiled: Minister HK Patil
ಗದಗ 27: ಗದಗ ಬೇಟಗೇರಿ ನಗರಸಭೆಯಿಂದ ನಹರದ ಸ್ವಚ್ಚತೆಗಾಗಿ ತ್ಯಾಜ್ಯ ಸಾಗಾಟದ ಟ್ರ್ಯಕ್ಟರ್ ಟ್ರೇಲರ್, ಮನೆ ಮನೆ ತ್ಯಾಜ್ಯ ಸಂಗ್ರಹಣೆಗೆ ಮಿನಿ ಟಿಪ್ಪರ್ ವಾಹನಗಳನ್ನು. ಸಾರ್ವಜನಿಕ ಉಪಯೋಗಕ್ಕೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ಲೋಕಾರ್ಫಣೆ ಮಾಡಿದರು.
ನಗರಸಭೆ ಆವರಣದಲ್ಲಿ ಮಂಗಳವಾರ ಸಚಿವರು ನಗರಸಭೆ ಕಾರ್ಯಾಲಯ ಸನ್ 2024/25 ನೇ ಸಾಲೀನ 15 ನೇ ಹಣಕಾಸು ನಿರ್ಭಂಧಿತ ಯೋಜನೆಯ ಅವನುದಾನದಲ್ಲಿ ತ್ಯಾಜ್ಯ ಸಾಗಾಟದ 4 ಟ್ರ್ಯಕ್ಟರ್ ಟ್ರೇಲರ್, ಮನೆ ಮನೆ ತ್ಯಾಜ್ಯ ಸಂಗ್ರಹಣೆಗೆ 6 ಮಿನಿ ಟಿಪ್ಪರ್ ವಾಹನಗಳನ್ನು ಸಾರ್ವಜನಿಕ ಉಪಯೋಗಕ್ಕೆ ಒಟ್ಟು ಅಂದಾಜು 1 ಕೋಟಿ ವೆಚ್ಚದಲ್ಲಿ ಖರೀದಿಸಲಾದ ವಾಹನಗಳನ್ನು ಲೋಕಾರೆ್ಣ ಮಾಡಿದರು. ಇದೇ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ ಅವರು ನಗರಸಭೆಯಿಂದ ಬಿ ಖಾತಾ ಉತಾರಗಳನ್ನು ಸಾಂಕೇತಿಕವಾಗಿ ಫಲಾನುಭವಿಗಳಿಗೆ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ ಬಿ ಅಸೂಟಿ, ತಾಲ್ಲೂಕು ಅಧ್ಯಕ್ಷ ಅಶೋಕ ಮಂದಾಲಿ, ಎಸ್ ಎನ್ ಬಳ್ಳಾರಿ, ಸಿದ್ದು ಪಾಟೀಲ, ಪ್ರಭು ಬುರಬುರೆ, ಜಿಲ್ಲಾಧಿಕಾರಿ ಸಿ ಎನ್ ಶ್ರೀಧರ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ ಸೇರಿದಂತೆ ನಗರಸಭೆ ಸದಸ್ಯರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 