ತುಂಬಿದ ಘಟಪ್ರಭಾ ನದಿಗೆ ನೀರು: ಢವಳೇಶ್ವರ ಸೇತುವೆ ಮುಳುಗಡೆ
Water in Ghataprabha River overflows: Dhavaleshwar Bridge submerged

ಮಹಾಲಿಂಗಪುರ 20: ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಸಮೀಪದ ಢವಳೇಶ್ವರ ಸೇತುವೆ ಮಂಗಳವಾರ ಸಂಜೆ ಜಲಾವೃತಗೊಂಡಿದೆ.
ಮಹಾರಾಷ್ಟ್ರದ ಅಂಬೋಲಿ ಘಟ್ಟ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಘಟಪ್ರಭಾ ನದಿ ಮೂಲಕ ಹಿಡಕಲ್ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರಲಾರಂಭಿಸಿದೆ.
ನೀರಿನ ತೀವ್ರತೆ ಹಿರಣ್ಯಕೇಶಿ 56220 ಕ್ಯೂಸೆಕ್ಸ್ ಒಳ ಹರಿವು, ಮಾಕಂರ್ಡೆಯ 6900 ಕ್ಯೂಸೆಕ್ಸ್ ಎಲ್ಲಾ ಸೇರಿ ಘಟಪ್ರಭಾ ನದಿ ನೀರಿನ ಹರಿವು 63120 ಕ್ಯೂಸೆಕ್ಸ್ ಹರಿಯುತ್ತಿದ್ದು ಅಪಾಯಮಟ್ಟವನ್ನು ತೋರಿಸುತ್ತಿದೆ.ಢವಳೇಶ್ವರ ಸೇತುವೆ ಸೇರಿದಂತೆ ನಂದಗಾವ-ಅವರಾದಿ, ಸೇತುವೆಗಳು ಜಲಾವೃತಗೊಂಡಿವೆ. ಸೇತುವೆ ಸಂಪರ್ಕ ಹೊಂದಿದ ಹತ್ತಾರು ಗ್ರಾಮಗಳ ಗ್ರಾಮಸ್ಥರು ಪ್ರವಾಹ ಭೀತಿ ಎದುರಿಸುತ್ತಿದ್ದಾರೆ.
ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ತೆರಳಬೇಕು ಎಂದು ಅಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 