ಇಸ್ಲಾಮಾಬಾದ್ 27: ಝೀಲಂ ನದಿಗೆ ನೀರು ಹರಿಬಿಟ್ಟ ಪರಿಣಾಮ ಪಾಕಿಸ್ತಾನದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಭಾರತವು ಝೀಲಂ ನದಿಗೆ ನೀರು ಹರಿಸಿದ ಪರಿಣಾಮ ಮುಜಾಫರಾಬಾದ್ ಬಳಿ ನೀರಿನ ಮಟ್ಟ ಹೆಚ್ಚಾಗಿದ್ದು, ಅಲ್ಲಿನ ಸ್ಥಲೀಯ ಆಡಳಿತವು ಹಟ್ಟಿಯನ್ ಬಾಲಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ.ಮಸೀದಿಗಳಲ್ಲಿ ಈ ಬಗ್ಗೆ ಪ್ರಕಟಣೆ ಹೊರಡಿಸಿ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಸಿಂಧೂ ನದಿ ನೀರು ಹರಿಯುವುದನ್ನು ನಿಲ್ಲಿಸಿದರೆ ಭಾರತದಲ್ಲಿ ರಕ್ತದ ನದಿಯನ್ನು ಹರಿಸುತ್ತೇವೆ ಎಂದು ಹೇಳಿದ್ದ ಪಾಕಿಸ್ತಾನಕ್ಕೆ, ನೀರು ಹರಿಸುವ ಮೂಲಕವೇ ಭಾರತ ತಿರುಗೇಟು ನೀಡಿದೆ.
ಇದರಂತೆ ನದಿ ತೀರದ ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಭಾರತವು ಇಂಡಸ್ ವಾಟರ್ ಟ್ರೀಟಿ ಒಪ್ಪಂದವನ್ನು ರದ್ದುಗೊಳಿಸುವ ಬೆದರಿಕೆ ಹಾಕಿದ ನಂತರ ಈ ಬೆಳವಣಿಗೆ ಕಂಡು ಬಂದಿದೆ.
ಈ ನಡುವೆ ಭಾರತವು ಅಂತರಾಷ್ಟ್ರೀಯ ನಿಯಮಗಳನ್ನು ಉಲ್ಲಂಘಿಸುತ್ತಿದೆ ಎಂದು ಪಾಕಿಸ್ತಾನ ಆರೋಪಿಸಿದ್ದು, ಈ ಕ್ರಮವು ಅಂತರಾಷ್ಟ್ರೀಯ ಒಪ್ಪಂದಗಳಿಗೆ ವಿರುದ್ಧವಾಗಿದೆ ಎಂದು ಹೇಳುತ್ತಿದೆ.
ಯಾವುದೇ ಪೂರ್ವಸೂಚನೆ ನೀಡದೇ ಭಾರತ ಏಕಾಏಕಿ ನದಿಗೆ ನೀರನ್ನು ಹರಿಸಿದೆ ಎಂದು ಪಾಕ್ ಮಾಧ್ಯಮಗಳು ಭಾರತದ ವಿರುದ್ಧ ಆರೋಪ ಮಾಡಿದೆ. ಭಾರತವು ಉದ್ದೇಶಪೂರ್ವಕ ‘ಜಲ ಭಯೋತ್ಪಾದನೆಯಲ್ಲಿ’ ತೊಡಗಿದೆ ಎಂದು ಪಿಒಕೆ ಸರ್ಕಾರ ಆರೋಪಿಸಿದೆ.
ಹಟ್ಟಿಯನ್ ಬಾಲಾದಲ್ಲಿ ಆಡಳಿತವು ತಾತ್ಕಾಲಿಕ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ನಾವು ನಮ್ಮಿಂದ ಸಾಧ್ಯವಿರುವ ಎಲ್ಲವನ್ನೂ ಮಾಡುತ್ತಿದ್ದೇವೆ. ಆದರೆ. ಭಾರೀ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.