ಕೃಷ್ಣಾ ಹಾಗೂ ಉಪನದಿಗಳಿಗೆ ನೀರಿನ ಮಟ್ಟ ಏರಿಕೆ: ಮಲಿಕವಾಡ ದತ್ತವಾಡ ಬ್ರಿಜ್ ಮುಳುಗಡೆ
Water level rises in Krishna and tributaries: Malikwad-Dattawad bridge submerged
ಮಾಂಜರಿ 27: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಹಾಗೂ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ನಿರಂತವಾಗಿ ಸುರುಯುತ್ತಿರುವ ಮಳೆಯಿಂದಾಗಿ ಕೃಷ್ಣಾ ಹಾಗೂ ಉಪನದಿಗಳಿಗೆ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಪರಿಣಾಮ ತಾಲೂಕಿನ 8 ಕೆಳಹಂತದ ಸೇತುವೆಗಳು ಜಲಾವೃತಗೊಂಡಿವೆ.ಮಹಾರಾಷ್ಟ್ರದ ಸಾಂಗಲಿ, ಕೊಲ್ಲಾಪೂರ ಸೇರಿದಂತೆ ವಿವಿಧ ಭಾಗಗಳಲ್ಲಿ ಹಾಗೂ ಚಿಕ್ಕೋಡಿ, ನಿಪ್ಪಾಣಿ ತಾಲೂಕಿನಲ್ಲಿ ಕಳೆದ 8 ದಿನಗಳಿಂದ ನಿರಂತರವಾಗಿ ಸುರುಯುತ್ತಿರುವ ಮಳೆಯಿಂದಾಗಿ ಕೃಷ್ಣಾ ವೇದ ಗಂಗಾ, ದೂಧಗಂಗಾ ನದಿಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಏರಿಕೆಯಾಗುತ್ತಿದೆ. ಪರಿಣಾಮ ಇವತ್ತು ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಯಡೂರ-ಕಲ್ಲೋಳ ಬ್ಯಾರೇಜ್, ಮಾಂಜರಿ ಸೌದತ್ತಿ ಹಾಗೂ ದೂಧಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಮಲಿಕವಾಡ ದತ್ತವಾಡ ಬ್ರಿಜ್ ಮುಳಗಡೆಯಾಗಿದೆ.
ಚಿಕ್ಕೋಡಿ, ನಿಪ್ಪಾಣಿ ತಾಲೂಕಿನ ಒಟ್ಟು 8 ಸೇತುವೆಗಳು ಜಲಾವೃತಗೊಂಡಿವೆ. ನದೀತೀರದಲ್ಲಿ ನೀರಿನ ಮಟ್ಟಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ರಾಜಾಪೂರ ಬ್ಯಾರೇಜನಿಂದ 22,250 ಕ್ಯೂಸೆಕ್, ದೂಧಗಂಗಾ ನದಿಯಿಂದ 10,910 ಕ್ಯೂಸೆಕನಷ್ಟು ನೀರು ಹರಿದು ಬರುತ್ತಿದೆ. ಕಲ್ಲೋಳ ಬ್ಯಾರೇಜ್ ನಿಂದ ಒಟ್ಟು 33,160 ಕ್ಯೂಸೆ ಕನಷ್ಟು ನೀರು ಬರುತ್ತಿದೆ.ನದೀತೀರದ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಚಿಕ್ಕೋಡಿ ತಾಲೂಕಿನ ಯಡೂರು ಕಲ್ಲೋಳ್ ಬಾಂಧಾರ ಮುಳುಗಡೆಯಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 