ನೀರು ಪೂರೈಕೆ, ಜನಗಣತಿ, ಇ-ಪೌತಿ: ಸರಕಾರದ ನಿರ್ದೇಶನ ಪಾಲನೆಗೆ ಸೂಚನೆ
Water supply, census, e-payment: Instructions to follow government directives
ಬೆಳಗಾವಿ 07: ಬೇಸಿಗೆ ಆರಂಭಗೊಂಡಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಗುರುತಿಸಿ, ಸಮೀಪದ ಖಾಸಗಿ ಬೋರವೆಲ್‌ಗಳ ಸಹಾಯದಿಂದ ನೀರು ಸರಬರಾಜು ಮಾಡಲು ಮೈಕ್ರೋ ಪ್ಲಾನ್ ರೂಪಿಸುವಂತೆ ಪ್ರಾದೇಶಿಕ ಆಯುಕ್ತೆ ಜಾನಕಿ ಕೆ.ಎಂ. ಅವರು ಬೆಳಗಾವಿ ವಿಭಾಗದ ಜಿಲ್ಲಾಧಿಕಾರಿಗಳಿಗೆ ನಿರ್ದೇಶನಗಳನ್ನು ನೀಡಿದರು. ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಏಪ್ರಿಲ್ 4 ರಂದು ಜರುಗಿದ ವಿಭಾಗೀಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಗತ್ಯವಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಲು ಹಾಗೂ ಪ್ರಕೃತಿ ವಿಕೋಪ ನಿರ್ವಹಣೆಯಡಿ ಪ್ರತಿ ವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲು ಸೂಚಿಸಿದರು. ಜನಗಣತಿ ಕಾರ್ಯವನ್ನು ಯಶಸ್ವಿಗೊಳಿಸಲು ಗ್ರಾಮೀಣ ಭಾಗದಂತೆ ನಗರ ಪ್ರದೇಶಗಳಲ್ಲಿಯೂ ವಿಡಿಯೋ ಪ್ರದರ್ಶನಗಳ ಮೂಲಕ ಜಾಗೃತಿ ಮೂಡಿಸಬೇಕು. ಖಜಟಜಿ ಇಟಿಣಟಜಡಿಚಿಣಠ ಪ್ರಕ್ರಿಯೆ ಈಗಾಗಲೇ ಚಾಲ್ತಿಯಲ್ಲಿದ್ದು, ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದರು.
ಇ-ಪೌತಿ ಸಂಬಂಧಿಸಿದಂತೆ ಸರ್ಕಾರದ ಮಾರ್ಗಸೂಚಿಗಳನ್ನು ಸರಳೀಕರಿಸಲಾಗಿದ್ದು, ಅದರ ಪ್ರಗತಿಯನ್ನು ವೇಗಗೊಳಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ ಜಮೀನುಗಳ ನಿರ್ವಹಣೆಯಲ್ಲಿ ಗುತ್ತಿಗೆ ನೀಡಿರುವ ಜಮೀನುಗಳ ಪರೀಶೀಲನೆ ನಡೆಸಿ, ಅವುಗಳನ್ನು ಸರಿಯಾಗಿ ವರ್ಗೀಕರಿಸಿ ಪ್ಲಾಗ್ ಮಾಡುವಂತೆ ಸೂಚನೆ ನೀಡಿದರು. ಬೆಳಗಾವಿ ವಿಭಾಗದಲ್ಲಿ ಬಾಕಿ ಇರುವ ಸರ್ಕಾರಿ ಜಮೀನು ಮತ್ತು ಕೆರೆಗಳ ಒತ್ತುವರಿಯನ್ನು ತ್ವರಿತವಾಗಿ ತೆರವುಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದಲ್ಲದೆ, ಗ್ರಾಮಾಡಳಿತಾಧಿಕಾರಿ ಮತ್ತು ಗ್ರಾಮ ಪಂಚಾಯತಿಗಳ ಟ್ಯಾಗಿಂಗ್ ಪ್ರಕ್ರಿಯೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಸೂಚಿಸಿದರಲ್ಲದೇ ಬಾಕಿ ಇರುವ ಕಂದಾಯ ನ್ಯಾಯಾಲಯ ಪ್ರಕರಣಗಳನ್ನು ಕೂಡಲೇ ಇತ್ಯರ್ಥಪಡಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 