ಕೊಲ್ಹಾರ ಪಟ್ಟಣದಲ್ಲಿ ನೀರು ಸರಬರಾಜಿನ ಸಮಸ್ಯೆ
Water supply problem in Kolhara town
ಕೊಲ್ಹಾರ 18 : ಪಟ್ಟಣ ಪಂಚಾಯಿತಿಯ ವಾರ್ಡ್ ನಂ 1 ರಲ್ಲಿ ಕಳೆದ ಒಂದು ತಿಂಗಳಿನಿಂದ ನೀರು ಸರಿಯಾಗಿ ಬಿಡ್ತಾ ಇಲ್ಲಾ ಎಂದು ಇಲ್ಲಿನ ನಿವಾಸಿಗಳು ಬುಧವಾರ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೊಲ್ಹಾರ ಪಕ್ಕದಲ್ಲಿಯೇ ಕೃಷ್ಣಾ ನದಿ ಇದ್ದು ಸಾಕಷ್ಟು ನೀರು ಇದ್ರು ಪಟ್ಟಣಕ್ಕೆ ಸರಿಯಾಗಿ ನೀರು ಸರಬರಾಜು ಮಾಡುತ್ತಿಲ್ಲಾ ಇದರಲ್ಲಿ ಗುತ್ತಿಗೆದಾರರ ನಿರ್ಲಕ್ಷ್ಯವೇ ಅಥವಾ ಅಧಿಕಾರಿಗಳ ನಿರ್ಲಕ್ಷ್ಯವೋ ಗೋತ್ತಿಲ್ಲ ಪಟ್ಟಣದಲ್ಲಿ ನೀರಿನ ಅಭಾವ ಸೃಷ್ಟಿಯಾಗಿ ಜನರು ನೀರಿಲ್ಲದೆ ಪರದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಧಿಕಾರಿಗಳು ಕೂಡಲೇ ನಮ್ಮ ವಾರ್ಡಿನಲ್ಲಿ ನೀರಿನ ಸಮಸ್ಯೆಯನ್ನು ಅರ್ಥಮಾಡಿಕೊಂಡು ಕೂಡಲೇ ಬಗೆಹರಿಸಬೇಕು ಇದೆ ರೀತಿ ಮುಂದುವರೆದರೆ ಪಟ್ಟಣ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪಟ್ಟಣದ ವಾರ್ಡ ನಂ 1 ರಲ್ಲಿ ನೀರಿನ ಸಮಸ್ಯೆ ಕುರಿತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳ ಗಮನಕ್ಕೆ ಬಂದ ಕೂಡಲೇ ತಕ್ಷಣ ಗುತ್ತಿಗೆದಾರನಿಗೆ ಹೇಳಿ ವಾಟರ್ ಟ್ಯಾಂಕ್ ಗಳಿಗೆ ನೀರು ತುಂಬಿಸಿ ವಾರ್ಡಿನಲ್ಲಿದ್ದ ನಿವಾಸಿಗಳಿಗೆ ನೀರಿನ ವ್ಯವಸ್ಥೆ ಕಲ್ಪಿಸಿದ್ದಾರೆ .ಇದೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ತೋಟದ , ದಯಾನಂದ ಕುಂಬಾರ, ಬಸವರಾಜ ಹಳ್ಳೂರ, ಶ್ರೀಶೈಲ ಕುಂಬಾರ, ಸುರೇಶ ಕುಂಬಾರ, ಸುನಿಲ್ ಕುಲಕರ್ಣಿ ಸೇರಿದಂತೆ ಹಲವರು ಮಹಿಳೆಯರು ಇದ್ದರು. ಕೊಟ್ ಕೊಲ್ಹಾರ ಪಟ್ಟಣದ ವಾಟರ್ ಟ್ಯಾಂಕಗಳಿಗೆ ನೇರವಾಗಿ ನೀರು ಬಾರದೆ ಹಳ್ಳಿಗಳಿಗೆ ಹೋಗಿ ಪಟ್ಟಣಕ್ಕೆ ನೀರು ಬರುತ್ತಿರುವುದರಿಂದ ನೀರಿನ ಸಮಸ್ಯೆ ಆಗುತ್ತಿದೆ ರಾಷ್ಟ್ರೀಯ ಹೆದ್ದಾರಿಯಿಂದ ನೇರವಾಗಿ ಪೈಪ್ಲೈನ್ ಜೋಡನೆ ಮಾಡಿ ಪಟ್ಟಣಕ್ಕೆ ನೀರು ಒದಗಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ ಅವರು ಮಾಡುತ್ತಿಲ್ಲ ಇದರಿಂದ ನೇರವಾಗಿ ಸಚಿವರಿಗೆ -ವಿರೇಶ ಹಟ್ಟಿ ಪಪಂ ಮುಖ್ಯಾಧಿಕಾರಿ ಮನವಿ ಮಾಡಿದ್ದಾರೆ. ಕೊಲ್ಹಾರ
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 