ಮಾ. 30ರಂದು ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ

ಮಾ. 30ರಂದು ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ Water to be released from Hidkal reservoir on March 30: Minister Satish Jarkiholi

ಬೆಳಗಾವಿ  29: ಮಾ.30ರಂದು ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ  ವಿಷಯ ತಿಳಿಸಿದ ಸಚಿವರು,  ಪ್ರತಿ ವರ್ಷದಂತೆ ಈ ಬಾರಿಯು  ಹಿಡಿಕಲ್ ಡ್ಯಾಂ ನಿಂದ  ಘಟಪ್ರಭೆ ನದಿಗೆ ಕುಡಿಯಲಿಕ್ಕೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಮಾಡಲಾಗಿದೆ. ಇದೇ 30ರಂದು  ಘಟಪ್ರಭೆ ನದಿಗೆ ನೀರು ಹರಿಸಲಾಗುತ್ತಿದ್ದು, ಈ ಕ್ರಮಕ್ಕೆ ಚುನಾವಣಾ ಆಯೋಗದಿಂದ ಅನುಮತಿ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಏ.7ರಂದು ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ  ನೀರು ಹರಿಸಲು ನಿರ್ಧಾರ ಮಾಡಲಾಗಿದ್ದು,  ನೀರು ಪೋಲಾಗದಂತೆ,  ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ ಹಾಗೂ ಸಾರ್ವಜನಿಕರಿಗೆ ಸಚಿವರು  ಮನವಿ ಮಾಡಿದ್ದಾರೆ. ರೈತರ ಅನುಕೂಲಗೋಸ್ಕರ್ ನೀರು ಬಿಡುಗಡೆ: ಈ ನೀರು ಬಿಡುಗಡೆ ಮಾಡಲು ಸುಮಾರು 6 ತಿಂಗಳ ಕಾಲ ನೀರು ಸಂಗ್ರಹ ಮಾಡಬೇಕಾಗುತ್ತದೆ.  ಆ ನಿಟ್ಟಿನಲ್ಲಿ ಸುಮಾರು ವರ್ಷಗಳಿಂದ ರೈತರಗೆ ಅನುಕೂಲವಾಗಲೆಂದು ನೀರು ಹರಿಸಲಾಗುತ್ತಿದೆ. ಈ ನೀರನ್ನು ಜಿಲ್ಲೆಯ ರೈತರು ಹಾಗೂ ಸಾರ್ವಜನಿಕರು ಪೋಲಾಗದಂತೆ ಸದ್ಬಳಕೆ ಮಾಡಿಕೊಳ್ಳಬೇಕೆಂದು  ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.