ಲೋಕದರ್ಶನ ವರದಿ
ವಿಜಯಪುರ 09: ಆಲಮಟ್ಟಿ ಜಲಾಶಯವನ್ನು 524.256 ಮೀಟರ್ಗೆ ಎತ್ತರಿಸಿದರೆ ಮಾತ್ರ ಜಿಲ್ಲೆಯ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ. ಮುಂಗಾರು-ಹಿಂಗಾರು ಬೆಳೆಗಳಿಗೆ ಅಗತ್ಯ ನೀರು ಸಿಗುತ್ತದೆ ಎಂದು ಆರೋಗ್ಯ ಸಚಿವ, ಕೃಷ್ಣಾ ಮೇಲ್ದಂಡೆ ಯೋಜನೆ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವಾನಂದ ಪಾಟೀಲ ಅಭಿಪ್ರಾಯಪಟ್ಟರು.
ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಂಡ್ ಮೂಲಕವಾದರೂ ಹಣ ಸಂಗ್ರಹಿಸಿ ಜಲಾಶಯ ಎತ್ತರಿಸುವ ಕೆಲಸ ಕೈಗೊಳ್ಳಬೇಕು. ಈ ಕುರಿತಂತೆ ಶನಿವಾರ ಆಲಮಟ್ಟಿಯಲ್ಲಿ ನಡೆಯಲಿರುವ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ಪ್ರ್ರಸ್ತುತ ಎದುರಾಗಿರುವ ನೀರಿನ ಸಮಸ್ಯೆಗೆ ಜಲಾಶಯ ಎತ್ತರಿಸದಿರುವುದೇ ಕಾರಣ. ಒಂದು ವೇಳೆ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು 524.256 ಮೀಟರ್ಗೆ ಎತ್ತರಿಸಿದರೆ ಅಗತ್ಯ ನೀರು ಲಭ್ಯವಾಗುತ್ತದೆ. ಜಲಾಶಯ ಎತ್ತರಿಸುವ ಬಗ್ಗೆ ತಾವು ಕೂಡ ಸರಕಾರದ ಗಮನ ಸೆಳೆಯುವುದಾಗಿ ಹೇಳಿದರು.
ಮಾಚರ್್ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ(ನಡಹಳ್ಳಿ) ಪಾದಯಾತ್ರೆ ಕೈಗೊಂಡಿರುವ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾಲುವೆಗೆ ನೀರು ಹರಿಸಿ ಎಂದು ಯಾರೂ ಪಾದಯಾತ್ರೆ ಕೈಗೊಂಡಿಲ್ಲ. ಶಾಸಕ ನಡಹಳ್ಳಿ ಕೂಡ ನೀರಾವರಿ ಸಲಹಾ ಸಮಿತಿ ಸದಸ್ಯರಿದ್ದು, ಸಭೆಯಲ್ಲಿ ತಮ್ಮ ಬೇಡಿಕೆಯನ್ನು ಮಂಡಿಸಬಹುದು ಎಂದು ಎಂದರು.