ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನದಿಂದ ನಾವಿಂದು ನೆಮ್ಮದಿಯಿಂದ್ದೇವೆ
We are happy today because of the sacrifices of the freedom fighters
ಹಾವೇರಿ, 16: ಅತ್ಯಂತ ಭರದಿಂದ ಅಭಿವೃದ್ಧಿಯತ್ತ ಸಾಗುತ್ತಿರುವ ಭವ್ಯ ಭಾರತವನ್ನು ಬ್ರಿಟೀಷರಿಂದ ಬಿಡುಗಡೆಗೊಳಿಸಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನ ಮತ್ತು ರಾಷ್ಟ್ರೇ್ರವನ್ನು ಯಾರೂ ಮರೆಯುವಂತಿಲ್ಲ. ಅವರ ಒಮ್ಮನದ ಹೋರಾಟದ ಫಲವೇ ನಾವಿಂದು ಸ್ವತಂತ್ರ ಭಾರತದಲ್ಲಿರುವುದು ಎಂದು ಪ್ರಾಚಾರ್ಯ ಪ್ರೊ. ಎಂ. ಎಂ. ಹೊಳ್ಳಿಯವರ ಹೇಳಿದರು.
ಅವರು ನಗರದ ಪ್ರತಿಷ್ಠಿತ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಜರುಗಿದ 79 ನೇ ಸ್ವಾತಂತ್ರ್ಯೋತ್ಸವ ನಿಮಿತ್ಯ ತ್ರಿವರ್ಣ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಿದ್ದರು.
ಪ್ರತಿ ವರ್ಷವು ಸಹ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನ ಆಚರಣೆ ಮಾಡಲಾಗುತ್ತದೆ. ಈ ದಿನವನ್ನು ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಿಂದ 1947 ರಲ್ಲಿ ದೇಶ ಬಿಡುಗಡೆ ಹೊಂದಿದ ದಿನವಾಗಿ ಗುರುತಿಸಲು ಆಚರಣೆ ಮಾಡಲಾಗುತ್ತದೆ. ಸ್ವಾತಂತ್ರ್ಯ ಎಂದರೆ ಪ್ರತಿಯೊಬ್ಬ ವ್ಯಕ್ತಿಗೆ ಈ ಭಾರತದಲ್ಲಿ ಎಲ್ಲ ರೀತಿಯ ಮೂಲಭೂತ ಹಕ್ಕು ಇದೆ. ಎಲ್ಲ ರೀತಿಯ ಸ್ವಾತಂತ್ರ್ಯ ಇದೆ. ಆದರೆ ಒಬ್ಬ ವ್ಯಕ್ತಿಯು ತನ್ನ ಸ್ವಾತಂತ್ರ್ಯ ಹಕ್ಕಿನಿಂದ ಮತ್ತೊಬ್ಬರ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವ ಯಾವುದೇ ಕೆಲಸ ಮಾಡಬಾರದು.
ಬ್ರಿಟಿಷರಿಂದ ಸ್ವಾತಂತ್ರ್ಯಗೊಂಡ ನಂತರ ಭಾರತ ದೇಶವು ಹಲವು ಮೈಲಿಗಲ್ಲುಗಳನ್ನು ಕಂಡಿದೆ. ಆರ್ಥಿಕತೆ, ರಾಜಕೀಯ, ತಂತ್ರಜ್ಞಾನ, ವಿಜ್ಞಾನ, ಮೂಲಸೌಕರ್ಯಗಳು ಹೀಗೆ ಎಲ್ಲಾ ಕ್ಷೇತ್ರಗಳಲ್ಲು ಸಹ ಅನೇಕ ಸಾಧನೆಗಳಿಗೆ ಸಾಕ್ಷಿಯಾಗಿದೆ. ಈ ಸಾಧನೆ, ಅಭಿವೃದ್ಧಿಗಳ ಸಂಖ್ಯೆ ಸ್ವಾತಂತ್ರ್ಯ ಭಾರತದಲ್ಲಿ ಹೆಚ್ಚುತ್ತಲೇ ಇರುತ್ತದೆ ಹೊರತು, ಎಂದಿಗೂ ಇದಕ್ಕೆ ಅಂತ್ಯ ಎನ್ನುವುದಿಲ್ಲ. ಎಲ್ಲಿ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಯಾವ ದೇಶದ ಪ್ರಜೆಗಳಿಗೆ ಸ್ವಾತಂತ್ರ್ಯ ಇರುತ್ತದೋ, ಎಲ್ಲಿಯವರೆಗೆ ಪ್ರಜೆಗಳು ಸ್ವಾತಂತ್ರ್ಯರಾಗಿರುತ್ತಾರೋ ಅಲ್ಲಿಯವರೆಗೆ ದೇಶದ ಅಭಿವೃದ್ಧಿ, ಪ್ರಜೆಗಳ ಅಭಿವೃದ್ಧಿ, ನಾಡಿನ ಅಭಿವೃದ್ಧಿ, ಒಂದು ಕುಟುಂಬದ ಅಭಿವೃದ್ಧಿ ನಿರಂತರವಾಗಿ ಸಾಗುತ್ತಿರುತ್ತದೆ. ಅದಕ್ಕೆ ಕೊನೆ ಎಂಬುದು ಇಲ್ಲ. ಅದಕ್ಕೆ ಇಂದಿನ ಭಾರತವೇ ಸಾಕ್ಷಿ ಎಂದರು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಪ್ರಾಚಾರ್ಯ ಡಾ. ಜೆ. ಆರ್. ಶಿಂಧೆ, ಎನ್.ಎಸ್.ಎಸ್., ಎನ್.ಸಿ.ಸಿ., ರೇಂಜರ್ಸ ರೋವರ್ಸ ಅಧಿಕಾರಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ-ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. ಎನ್.ಸಿ.ಸಿ.ಅಧಿಕಾರಿ ಲೆಫ್ಟಿನೆಂಟ್ ಡಾ. ನಾಗರಾಜ ಎಂ. ನಿರ್ವಹಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಪೂಜಾ ಎಂ. ವಂದಿಸಿದರು. ಈ ಸಂದರ್ಭದಲ್ಲಿ ವಿಶೇಷ ಸಾಧನೆ ತೋರಿದಎನ್.ಸಿ.ಸಿ. ಕೆಡೆಟ್‌ಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 