ಕಲ್ಯಾಣ ಕರ್ನಾಟಕ ಹೋರಾಟಗಾರರ ತ್ಯಾಗದಿಂದಲೇ ನಾವು ಇಂದು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದೇವೆ : ಬಿ.ಕೆ. ರವಿ
We are on the path of progress today because of the sacrifices of Kalyana Karnataka fighters: B.K. R
ಕೊಪ್ಪಳ 17 : ಕಲ್ಯಾಣ ಕರ್ನಾಟಕ ಹೋರಾಟಗಾರರ ತ್ಯಾಗದಿಂದಲೇ ನಾವು ಇಂದು ಪ್ರಗತಿಯ ಹಾದಿಯಲ್ಲಿ ಸಾಗುತ್ತಿದ್ದೇವೆ. ಅವರ ಕನಸು ನನಸು ಮಾಡುವ ಹೊಣೆಗಾರಿಕೆ ಇಂದಿನ ಪೀಳಿಗೆಯ ಮೇಲಿದೆ ಎಂದು ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ. ರವಿ ತಿಳಿಸಿದರು.
ಕೊಪ್ಪಳ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ 78ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಶಿಕ್ಷಣವೇ ಸಮಾಜ ಪರಿವರ್ತನೆಯ ಸಾಧನವಾಗಿದ್ದು, ಕಲ್ಯಾಣ ಕರ್ನಾಟಕದ ನಿಜವಾದ ಶಕ್ತಿ ಶಿಕ್ಷಣ. ವಿದ್ಯಾರ್ಥಿಗಳು ಶ್ರಮಿಸಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಈ ಪ್ರದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ಆಡಳಿತಾಧಿಕಾರಿ ತಿಮ್ಮಾರೆಡ್ಡಿ ಮೇಟಿ ಮಾತನಾಡಿ, ಹೋರಾಟಗಾರರ ತ್ಯಾಗವನ್ನು ಕೇವಲ ಸ್ಮರಣೆಗೆ ಸೀಮಿತಗೊಳಿಸದೆ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ. ಕಲ್ಯಾಣ ಕರ್ನಾಟಕದ ಹೋರಾಟದ ಹಾದಿ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 