ಇರಾನ್ ಹಿಂಸಾಚಾರವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ; ಅಮೆರಿಕ

ವಾಷಿಂಗ್ಟನ್, ನ 19 :     ಇರಾನ್ ಸರ್ಕಾರದ ವಿರುದ್ಧ ಅಲ್ಲಿನ ಜನರು ನಡೆಸುತ್ತಿರುವ ಪ್ರತಿಭಟನೆಯನ್ನು ಅಮೆರಿಕ ಸರ್ಕಾರ ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ಅಲ್ಲಿನ ವಿದೇಶಾಂಗ ಸಚಿವ ಮೈಕ್ ಪಾಂಪಿಯಾ ಹೇಳಿದ್ದಾರೆ.    ಸುದ್ದಿಗೋಷ್ಠಿಯಲ್ಲಿ ಈ ವಿವರ ನೀಡಿದ ಅವರು, ಇರಾನ್ ನ ಹಿಂಸಾಚಾರವನ್ನುಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಇರಾನ್ ಜನರ ಮೇಲೆ ಯಾವುದೇ ಹಿಂಸಾಚಾರ ನಡೆಸುವುದನ್ನು ನಾವು ಖಂಡಿಸುತ್ತೇವೆ ಎಂದಿದ್ದಾರೆ.