ಬಡ ಮಕ್ಕಳ ಭವಿಷ್ಯವನ್ನು ಬೀದಿಗೆ ತಳ್ಳುತ್ತಿರುವ ಸರ್ಕಾರಕ್ಕೆ ನಮ್ಮ ಧಿಕ್ಕಾರ: ಬಸಯ್ಯ ದುಬ್ಬನಮರಡಿ
We condemn the government that is pushing the future of poor children onto the streets: Basaiah Dubb
ಲೋಕದರ್ಶನ ವರದಿ
’ನಮ್ಮೂರ ಶಾಲೆ ಮುಚ್ಚಲು ಬಿಡುವುದಿಲ್ಲ’ - ಹನುಮನಾಳ ಗ್ರಾಮಸ್ಥರ ಪ್ರತಿಭಟನೆ
ಧಾರವಾಡ 17: ಹನುಮನಾಳ ಗ್ರಾಮಸ್ಥರು ಊರಿನ ಶಾಲೆಯ ಎದುರು ಎಐಡಿಎಸ್‌ಒ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, 70 ವರ್ಷ ದಾಟಿದ ನಮ್ಮೂರ ಶಾಲೆಯನ್ನು ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ’ ಎಂದು ಸರ್ಕಾರದ ವಿರುದ್ಧ ಒಕ್ಕೊರಲಿನಿಂದ ಧ್ವನಿಯೆತ್ತಿದರು.
ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ ಮಾತನಾಡಿ, ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ 40,000ಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ರಾಜ್ಯ ಸರ್ಕಾರ ಮುಚ್ಚಲು ಮುಂದಾಗಿದೆ. ಈ ಯೋಜನೆ ಭಾಗವಾಗಿ ಉಪ್ಪಿನ ಬೆಟಗೇರಿಯ ಸರಕಾರಿ ಹಿರಿಯ ಪ್ರಾಥಮಿಕ ಉರ್ದು ಮಾಡೆಲ್ ಶಾಲೆಯನ್ನು ಮ್ಯಾಗ್ನೆಟ್ ಶಾಲೆಯನ್ನಾಗಿಸಿ ಹನುಮನಾಳ ಗ್ರಾಮದ ಶಾಲೆಯನ್ನು ಅಲ್ಲಿಗೆ ಸೇರಿಸಲಾಗುತ್ತಿದೆ.99 ದಾಖಲಾತಿ ಹೊಂದಿರುವ ಈ ಶಾಲೆಯನ್ನು ಮುಚ್ಚುತ್ತಿರುವ ಸರ್ಕಾರವು ಬಡ ರೈತ-ಕಾರ್ಮಿಕರ ಮಕ್ಕಳಿಗೆ ಅನ್ಯಾಯ ಮಾಡುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಮುಂದುವರೆದು,ಉಪ್ಪಿನ ಬೆಟಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆ ಉಪ್ಪಿನ ಬೆಟಗೇರಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹನುಮನಕೊಪ್ಪ, ಸರಕಾರಿ ಕಿರಿಯ ಪ್ರಾಥಮಿಕ ಉರ್ದು ಶಾಲೆ ಜಲೇಗಾರ್ ಓಣಿ ಉಪ್ಪಿನ ಬೆಟಗೇರಿ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹನುಮನಾಳ, ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸೈಬಾನ ಕೊಪ್ಪ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲೂರು ಸೇರಿದಂತೆ 7 ಶಾಲೆಗಳನ್ನು ಮುಚ್ಚಿ ಹೆಬ್ಬಳ್ಳಿಯ ಮ್ಯಾಗ್ನೆಟ್ ಶಾಲೆಗೆ ಸೇರಿಸಲಾಗುತ್ತಿದೆ. ಈ ರೀತಿ ಕೇವಲ ಧಾರವಾಡ ಜಿಲ್ಲೆಯಲ್ಲೇ 500 ಕ್ಕೂ ಹೆಚ್ಚು ಶಾಲೆಗಳನ್ನು ಮುಚ್ಚಲಾಗುತ್ತಿದೆ. ಸಮುದಾಯದ ನಡುವೆ ಇರುವ ಊರಿನ ಶಾಲೆಗಳನ್ನು ಮುಚ್ಚಿ, ಮಕ್ಕಳನ್ನು ದೂರದ ಶಾಲೆಗೆ ತಲುಪಿಸಲು ಉಚಿತ ಬಸ್ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳುತ್ತಿರುವ ಸರ್ಕಾರವು ಸಾರಿಗೆ ವ್ಯವಸ್ಥೆಯ ಹೊರೆಯನ್ನು ಎಸ್ ಡಿ ಎಂ ಸಿ ತಲೆಯ ಮೇಲೆ ಹೊರೆಸಿದೆ. ಮ್ಯಾಗ್ನೆಟ್ ಶಾಲೆಯ ನಿರ್ವಹಣೆಯನ್ನು ಹೊರಗುತ್ತಿಗೆ ಕೊಡಲಾಗುತ್ತದೆ. ಕ್ರಮೇಣವಾಗಿ ಸರ್ಕಾರಿ ಶಾಲೆಗಳನ್ನು ಖಾಸಗೀಕರಣಗೊಳಿಸಿ ಬಡ ಮಕ್ಕಳನ್ನು ಶಾಶ್ವತವಾಗಿ ದೂರ ತಳ್ಳುವ ಹುನ್ನಾರ ಎಂದು ಸರ್ಕಾರದ ನಿರ್ಧಾರವನ್ನು ಖಂಡಿಸಿದರು. ನಂತರ ಊರಿನ ಸಾರ್ವಜನಿಕ ಶಿಕ್ಷಣ ಉಳಿಸಿ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸಯ್ಯ ದುಬ್ಬನಮರಡಿ ಮಾತನಾಡಿ, ಬಡವರ ಮಕ್ಕಳು ಓದುವ ಗ್ರಾಮೀಣ ಭಾಗದ ಶಾಲೆಗಳನ್ನು ಸೌಲಭ್ಯ ಒದಗಿಸಿ ಅಭಿವೃದ್ಧಿ ಪಡಿಸಬೇಕಾದ ಸರ್ಕಾರವೇ ಇಂದು ಶಾಲೆಗಳನ್ನು ಮುಚ್ಚುತ್ತಿದೆ. ಬದಲಿಗೆ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಕ್ಕಾಗಿ ಸರ್ಕಾರಿ ಶಾಲೆಗಳನ್ನು ಮುಚ್ಚಿ ಹಣವಂತರಿಗೆ ಮಾತ್ರ ಶಿಕ್ಷಣ ಎಂಬ ಷಡ್ಯಂತ್ರವನ್ನು ಸರ್ಕಾರ ರಚಿಸಿದೆ. ನಮ್ಮ ಹನುಮನಾಳ ಶಾಲೆ ಮುಚ್ಚಿದರೆ ನಮ್ಮ ಮಕ್ಕಳನ್ನು ಖಂಡಿತ ನಾವು ಉಪ್ಪಿನ ಬೆಟಗೇರಿಗೆ ಕಳಿಸಲು ಸಾಧ್ಯವಿಲ್ಲ ಯಾಕೆಂದರೆ ಇಲ್ಲಿಯವರೆಗೂ ನಮ್ಮ ಊರಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲ ಅದಲ್ಲದೆ ಇಲ್ಲಿಯ ಜನರೆಲ್ಲಾ ಹೊಲದ ಕೆಲಸಕ್ಕೆ ಹೋದರೆ ಬರುವುದೇ ರಾತ್ರಿ ಯಾವ ಭರವಸೆಯ ಮೇಲೆ ನಾವು ಬೇರೆ ಊರಿಗೆ ನಮ್ಮ ಮಕ್ಕಳನ್ನು ಕಳಿಸಬೇಕು. ಮಳೆಗಾಲದಲ್ಲಿ ಇಲ್ಲಿ ಹಳ್ಳ ತುಂಬಿ ಹರಿಯುತ್ತದೆ. ಹೀಗಿರುವಾಗ ನಮ್ಮ ಮಕ್ಕಳನ್ನು ಹೇಗೆ ಉಪ್ಪಿನ ಬೆಟಗೇರಿಗೆ ಕಳಿಸಬೇಕು ಎಂದು ಸರ್ಕಾರವನ್ನು ಪ್ರಶ್ನಿಸಿದರು. ಸರ್ಕಾರಕ್ಕೆ ಕಿಂಚಿತ್ತಾದರೂ ಕಾಳಜಿ ಇದ್ದಿದ್ದರೆ ಮೂಲಭೂತ ಸೌಕರ್ಯಗಳನ್ನು ಕೊಟ್ಟು ನಮ್ಮ ಶಾಲೆಯನ್ನು ಬಲಪಡಿಸಬೇಕಿತ್ತು ಅದನ್ನು ಬಿಟ್ಟು ಮುಚ್ಚಿ ಹಾಕುತಿದ್ದಾರೆ. ಇದನ್ನು ನಮ್ಮೂರಿನ ಎಲ್ಲ ಗ್ರಾಮಸ್ಥರು ತೀವ್ರವಾಗಿ ವಿರೋಧಿಸುತ್ತೇವೆ. ನಮ್ಮ ಮಕ್ಕಳು ನಮ್ಮೂರಿನ ಶಾಲೆಯಲ್ಲಿ ಕಲಿಯುತ್ತಾರೆ.ಇಷ್ಟಾಗಿಯೂ ಸರ್ಕಾರ ನಮ್ಮ ಊರಿನ ಶಾಲೆಯನ್ನು ಮುಚ್ಚಲು ಮುಂದುವರೆದರೆ ಹನುಮನಾಳ ಗ್ರಾಮಸ್ಥರೆಲ್ಲ ಒಗ್ಗಟ್ಟಿನಿಂದ ಉಗ್ರ ಹೋರಾಟ ಮಾಡುತ್ತೇವೆ. ಸರ್ಕಾರ ಜನರ ಹೋರಾಟವನ್ನು ಎದುರಿಸಲು ಸಿದ್ಧವಾಗಲಿ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಊರಿನ ಗ್ರಾಮಸ್ಥರಾದ ರುದ್ರಗೌಡ ಪಾಟೀಲ, ಬಸಯ್ಯ ಹಿರೇಮಠ್, ಉಮೇಶ್ ಅಂಗಡಿ, ಮಂಜುನಾಥ್ ಮಡಿವಾಳರ್, ಅಕ್ಕಮಹಾದೇವಿ ಅಂಗಡಿ, ಮಲ್ಲನಗೌಡ ಪಾಟೀಲ್ ಹಾಗೂ ಪೋಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 