ಕಾವೇರಿ ಬಂದ್ಗೆ ನಮ್ಮ ಬೆಂಬಲ ಇಲ್ಲ: ಗವಿಸಿದ್ದಪ್ಪ ಹಂಡಿ
We do not support the Cauvery bandh: Gavisiddappa Handi
ಕೊಪ್ಪಳ, ಆ. 2: ಕಾವೇರಿ ನೀರಿನ ವಿವಾದ ಹಿನ್ನೆಲೆ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್ಗೆ ನಮ್ಮ ಸಂಘಟನೆಯ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವ ಸಲಹೆಗಾರ ಗವಿಸಿದ್ದಪ್ಪ ಎಸ್. ಹಂಡಿ ಸ್ಪಷ್ಟಪಡಿಸಿದ್ದಾರೆ.
ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರ ಸೂಚನೆಯಂತೆ ಸಂಘಟನೆ ಬಂದ್ನಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಂದ್ನಿಂದ ಸಾರ್ವಜನಿಕರು, ದಿನಗೂಲಿ ಕಾರ್ಮಿಕರು, ಸಣ್ಣ ವ್ಯಾಪಾರಿಗಳು, ರೈತರು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಸಂಘಟನೆಯ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಬಂದ್ಗೆ ಸಂಬಂಧಿಸಿದ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸಬಾರದು ಎಂದು ಗವಿಸಿದ್ದಪ್ಪ ಹಂಡಿ ಮನವಿ ಮಾಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 