ಕನ್ನಡ ನಾಡು-ನುಡಿಗಾಗಿ ಜೀವನ ಮುಡಿಪಾಗಿಟ್ಟಿದ್ದೇವೆ: ಮಲ್ಲಿಕಾರ್ಜುನ

ಕನ್ನಡ ನಾಡು-ನುಡಿಗಾಗಿ ಜೀವನ ಮುಡಿಪಾಗಿಟ್ಟಿದ್ದೇವೆ: ಮಲ್ಲಿಕಾರ್ಜುನ  We have dedicated our lives to the Kannada land and language: Mallikarjuna

ಲೋಕದರ್ಶನ ವರದಿ 

ಕಂಪ್ಲಿ 01 : ಕರವೇ (ನಾರಾಯಣಗೌಡ ಬಣ) ತಾಲ್ಲೂಕು ಅಧ್ಯಕ್ಷ ಬಳೆ ಮಲ್ಲಿಕಾರ್ಜುನ ಅವರು ಕನ್ನಡ ನಾಡು-ನುಡಿಯ ಸೇವೆಗೆ ಜೀವನ ಮುಡಿಪಾಗಿಟ್ಟಿದ್ದೇವೆ ಎಂದು ಹೇಳಿದರು.  ಪಟ್ಟಣದ 4ನೇ ವಾರ್ಡ್ನ ಸಂತೇ ಮಾರುಕಟ್ಟೆ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಅಂಗಡಿ ಶಂಕರ​‍್ಪ ಅವರ ಜನ್ಮದಿನದ ಅಂಗವಾಗಿ ಶಾಲಾ ಮಕ್ಕಳಿಗೆ ನೋಟ್ಬುಕ್, ಪೆನ್ ಮತ್ತು ಪೆನ್ಸಿಲ್ ವಿತರಿಸಿ ಅವರು ಮಾತನಾಡಿದರು.  

ಇಂದಿನ ಆಧುನಿಕ ಭಾರತದಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವಿದ್ದು, ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಅವರ ಭವಿಷ್ಯ ಉಜ್ವಲವಾಗುವುದರ ಜೊತೆಗೆ ದೇಶದ ಉತ್ತಮ ನಾಗರಿಕರಾಗಲು ಸಾಧ್ಯವಾಗುತ್ತದೆ ಎಂದರು.  

ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲಾಧ್ಯಕ್ಷ ಹೊಸಕೋಟೆ ಜಗದೀಶ್ ಮಾತನಾಡಿ, ನಾಡಿನ ನೆಲ, ಜಲ ಮತ್ತು ಭಾಷೆ ಉಳಿವಿಗಾಗಿ ಕರವೇ ಪದಾಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದರು.  

ಖಾಸಗಿ ಶಾಲೆಗಳ ಪೈಪೋಟಿಯಿಂದ ಸರ್ಕಾರಿ ಶಾಲೆಗಳ ಶಿಕ್ಷಣ ಕುಂಠಿತವಾಗುತ್ತಿರುವುದು ವಿಷಾದನೀಯ. ಸರ್ಕಾರಿ ಶಾಲೆಗಳ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಿದರೆ ಸರ್ಕಾರಿ ಶಾಲೆಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ಹೇಳಿದರು.  

ಕಾರ್ಯಕ್ರಮದಲ್ಲಿ ಕರವೇ ಘಟಕದ ಅಧ್ಯಕ್ಷ ರಾಘವೇಂದ್ರ, ವಿದ್ಯಾರ್ಥಿ ಘಟಕದ ಅಧ್ಯಕ್ಷ ಮುನ್ನಾ, ಜಿಲ್ಲಾ ಉಪಾಧ್ಯಕ್ಷ ಚಾನಾಳ್ ತಿಪ್ಪಾರೆಡ್ಡಿ, ತಾಲ್ಲೂಕು ಉಪಾಧ್ಯಕ್ಷ ವಿ.ಬಿ. ನಾಗರಾಜ್ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.  ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಅಂಗಡಿ ಶಂಕರ​‍್ಪ ಅವರ ಜನ್ಮದಿನದ ಪ್ರಯುಕ್ತ ಶಾಲಾ ಮಕ್ಕಳಿಗೆ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಲಾಯಿತು.