ಶ್ರೀ ಮಠದ ಜಾತ್ರೆಗೆ ಅಳಿಲು ಸೇವೆ ಮಾಡುವ ಅವಕಾಶ ನಮ್ಮದು - ಸುರೇಶ್ ಜಿ
We have the opportunity to serve the squirrels at the Sri Matha fair - Suresh Ji
ಕೊಪ್ಪಳ 31: ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ಧಿಪಡೆದ ಶ್ರೀಗವಿಸಿದ್ಧೇಶ್ವರ ಜಾತ್ರೆ ಮಹೋತ್ಸವಕ್ಕೆ ಅನೇಕ ಭಕ್ತರು ಸ್ವಯಂ ಪ್ರೇರಿತವಾದ ಸೇವೆಯನ್ನು ಮಾಡುತ್ತಾರೆ. ಶ್ರೀ ಮಠದ ಜಾತ್ರೆಗೆ ಅಳಿಲು ಸೇವೆ ಮಾಡುವ ಅವಕಾಶ ನಮ್ಮದಾಗಿದೆ ಎಂದು ಕೊಪ್ಪಳ ಜಿಲ್ಲಾ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಜಿ ಹೇಳಿದರು. ಶ್ರೀ ಗವಿಸಿದ್ಧೇಶ್ವರ ಜಾತ್ರೆ ಮಹೋತ್ಸವಕ್ಕೆ ದಿನಾಂಕ ದಿನಗಣನೆ ಆರಂಭವಾದದ್ದು ಹಾಗೂ ಜಾತ್ರೆಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಹಿತಿಯನ್ನು ಭಕ್ತರಿಗೆ ತಲುಪಿಸಲು ಮಾಧ್ಯಮದವರಿಗೆ ಅನುಕೂಲವಾಗಲು ಇಂದು ಇನಾಂಕ 31.12.2025 ರಂದು ಬೆಳಿಗ್ಗೆ 10:30 ಕ್ಕೆ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಜಾತ್ರೋತ್ಸವದ ನಿಮಿತ್ಯ ಸಿದ್ಧಪಡಿಸಿದ ಮಾಧ್ಯಮ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.
ಇಂತಹ ಒಂದು ಬೃಹತ್ ಜಾತ್ರೆಯಲ್ಲಿ ಯಾವುದೇ ಅಹಿತಕರವಾದ ಘಟನೆಗಳು ನಡೆದ ಉದಾಹರಣೆಗಳೇ ಇಲ್ಲ ಇದಕ್ಕಲ್ಲಾ ಕಾರಣ ಶ್ರೀ ಗವಿಸಿದ್ಧೇಶ್ವರರ ಶಕ್ತಿ. ಪ್ರಸ್ತುತ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮಿಗಳವರ ಅಮೃತವಾಣಿ ಜೀವನವನ್ನು ಉದ್ಧರಿಸುತ್ತವೆ. ಒಂದು ವಿಶ್ವವಿದ್ಯಾಲಯ ಮಾಡುವ ಕೆಲಸ ಶ್ರೀ ಮಠವು ಮಾಡುತ್ತಿದೆ. ಶ್ರೀ ಮಠದ ಸಾಂಸ್ಕೃತಿಕ ಸೇವೆಗಳನ್ನು ಪ್ರಸಾರ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಚನ್ನಬಸವ ಹಾಗೂ ಅನೇಕ ಪತ್ರಿಕಾ ಹಾಗೂ ದೂರದರ್ಶನ ಮಾಧ್ಯಮ ಈ ಸಂದರ್ಭದಲ್ಲಿ ಹಾಜರಿದ್ದರು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 