ಜಾತಿ-ವರ್ಗ ಭೇದವಿಲ್ಲದ ಸಮಾಜ ನಿರ್ಮಾಣಕ್ಕೆ ಶ್ರಮಿಸಬೇಕು: ಪಿ.ಟಿ. ಪರಮೇಶ್ವರನಾಯ್ಕ
We must strive to build a society free from caste and class distinctions: P.T. Parameshwar Naik
ಹೂವಿನಹಡಗಲಿ, ಆ. 28: ಮಹಮ್ಮದ್ ಪೈಗಂಬರ್, ಏಸು, ಬುದ್ಧ, ಬಸವ ಸೇರಿದಂತೆ ಹಲವು ಮಹನೀಯರು ಜಾತಿ, ವರ್ಗ ಭೇದವಿಲ್ಲದ ಸಮಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ್ದಾರೆ. ಅವರ ಆದರ್ಶಗಳನ್ನು ಪಾಲಿಸಿ ಎಲ್ಲರೂ ಏಕತೆಯಿಂದ ಬದುಕುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷ ಪಿ.ಟಿ. ಪರಮೇಶ್ವರನಾಯ್ಕ ಹೇಳಿದರು.
ಪಟ್ಟಣದ ಹಜರತ್ ರಾಜಾಬಾಗ್ ಸವಾರ ದರ್ಗಾ ಆವರಣದಲ್ಲಿ ಗುರುವಾರ ಈದ್ ಮಿಲಾದ್ ಕಮಿಟಿ ವತಿಯಿಂದ ಆಯೋಜಿಸಿದ್ದ ಸಾಮೂಹಿಕ ನಿಕಾಹ್ ಮಹೋತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶರಣರು, ದಾರ್ಶನಿಕರು ಹಾಗೂ ಸೂಫಿ ಸಂತರು ಸಮಾಜದಲ್ಲಿ ಭಾವೈಕ್ಯತೆ ಮತ್ತು ಸಹಬಾಳ್ವೆ ನೆಲೆಗೊಳ್ಳಲು ಅಪಾರ ಕೊಡುಗೆ ನೀಡಿದ್ದಾರೆ. ಅವರ ಸಂದೇಶಗಳನ್ನು ಅರಿತುಕೊಂಡು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಸಹೋದರತ್ವ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಮಹಮ್ಮದ್ ಪೈಗಂಬರ್, ಏಸು, ಬುದ್ಧ, ಬಸವ ಸೇರಿದಂತೆ ದಾರ್ಶನಿಕರು ಜಾತಿ-ವರ್ಗ ಭೇದವಿಲ್ಲದ ಸಮಸಮಾಜದ ಆಶಯ ಹೊಂದಿದ್ದರು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಎಲ್ಲರೂ ಒಗ್ಗಟ್ಟಿನಿಂದ ಬದುಕಬೇಕು ಎಂದು ಕರೆ ನೀಡಿದರು.
ಈದ್ ಮಿಲಾದ್ ಸಮಿತಿ ಅಧ್ಯಕ್ಷ ಬಾವಿಹಳ್ಳಿ ಸದ್ದಾಂ ಹುಸೇನ್ ಅಧ್ಯಕ್ಷತೆ ವಹಿಸಿದ್ದರು. ಎಸ್‌ಎಸ್‌ಎಫ್ ರಾಜ್ಯಾಧ್ಯಕ್ಷ ಮೊಹಮ್ಮದ್ ಸುಫಿಯಾನ್ ಸಖಾಫಿ ಹಾಗೂ ಮುಖಂಡ ಕೆ. ಗೌಸ್ ಮೊಹಿದ್ದೀನ್ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಟವಾಳಗಿ ಕೋಟ್ರೇಶ್, ಕೆ.ಎಸ್. ಶಾಂತನಗೌಡ, ಪಟ್ಟಣದ ಮುಸ್ಲಿಂ ಧಾರ್ಮಿಕ ಮುಖಂಡರು ಹಾಗೂ ಈದ್ ಮಿಲಾದ್ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 