ಅಧಿವೇಶನದಲ್ಲಿ ಜನವಿರೋಧಿ ನೀತಿಗಳ ವಿರುದ್ಧ ಧ್ವನಿ ಎತ್ತುತ್ತೇವೆ: ಸಿದ್ದರಾಮಯ್ಯ
ಚಿಕ್ಕಮಗಳೂರು, ಜ. 31, ಬರುವ ಅಧಿವೇಶನದಲ್ಲಿ ಜನವಿರೋಧಿ ನೀತಿ ಹಾಗೂ ರಾಜ್ಯದ ಇತರ ಸಮಸ್ಯೆಗಳ ಬಗ್ಗೆ ಪ್ರತಿಪಕ್ಷವಾಗಿ ಧ್ವನಿಯೆತ್ತುತ್ತೇವೆಯೇ ಹೊರತು ಅನಗತ್ಯವಾಗಿ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ ಚಿಕ್ಕಮಗಳೂರಿನಲ್ಲಿಂದು ಮಾತನಾಡಿದ ಅವರು, ವಿಧಾನಸಭೆಗೆ ಶಾಸಕರು ಬರುವುದು ಜನರ ಪ್ರತಿನಿಧಿಯಾಗಿಯಾಗಿ. ಹೀಗಾಗಿ ಜನರ ಧ್ವನಿಯಾಗಿ ಕೆಲಸ ಮಾಡಬೇಕು ಎಂದರು.
ಸಚಿವ ಸಿ.ಟಿ.ರವಿ ವಿರುದ್ಧ ಕಿಡಿಕಾರಿದ ಅವರು, ಸಿ.ಟಿ.ರವಿಗೆ ಎಂದಿಗೂ ಸತ್ಯ ಹೇಳಿ ಗೊತ್ತಿಲ್ಲ. ಅವರ ಮೈತುಂಬಾ ಇರುವುದು ಸುಳ್ಳು. ಸುಳ್ಳನ್ನೇ ಮೈಗೂಡಿಸಿಕೊಂಡಿದ್ದಾರೆ. ಬಿಜೆಪಿಯವರ ಅಭಿವೃದ್ಧಿಯಾಗಿದೆಯೇ ಹೊರತು ಕ್ಷೇತ್ರದ, ಜನರ ಅಭಿವೃದ್ಧಿಯಾಗಿಲ್ಲ. ಹಳ್ಳಿಯ ಜನರು ಇದನ್ನೇ ಹೇಳುತ್ತಿದ್ದಾರೆ ಎಂದು ಕುಟುಕಿದರು.ಕೇಂದ್ರದ ಬಜೆಟ್ ನಾಳೆ ಮಂಡನೆಯಾಗಲಿದೆ. ಕಳೆದ ಬಾರಿ ಬಜೆಟ್ 27 ಲಕ್ಷ ಕೋಟಿ ಖರ್ಚು ಮಾಡುವುದಾಗಿ ಹೇಳಿದ್ದರು. ಈ ಬಗ್ಗೆ ನಾಳೆ ತಿಳಿಯಲಿದೆ. ಸ್ವರ್ಗ ಸೃಷ್ಟಿ ಮಾಡುತ್ತೇವೆ ಎಂದವರು ಈಗ ನರಕ ಸೃಷ್ಟಿಸಿದ್ದಾರೆ. ಬಿಜೆಪಿ ಪ್ರಕಾರ ಜಿಡಿಪಿ ಶೇ 4.5 ಇದೆ.ನನ್ನ ಪ್ರಕಾರ ಶೇ. 2.5ರಷ್ಟು.10ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದರು. ಈಗ ಲಕ್ಷಾಂತರ ಉದ್ಯೋಗ ಕಡಿತವಾಗಿದೆ. ದೇಶದ ಅರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಇದನ್ನು ಮುಚ್ಚಿ ಹಾಕಲು ಸಿಎಎ, ಎನ್ ಅರ್ ಸಿ ಮೂಲಕ ಬೇರೆ ಕಡೆ ಸೆಳೆಯಲು ನಾಟಕ ವಾಡುತ್ತಿದ್ದಾರೆ ಎಂದು ಟೀಕಿಸಿದರು.ದೆಹಲಿಯಲ್ಲಿ ಪ್ರತಿಭಟನಕಾರರ ಮೇಲೆ ಗುಂಡು ಹಾರಿಸಿರುವ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪಚೋದನೆಯಿಂದಲೇ ಗುಂಡು ಹಾರಿಸಲಾಗಿದೆ. ಮಹಾತ್ಮ ಗಾಂಧಿಯನ್ನ ಕೊಂದಿದ್ದು ಅರ್ ಎಸ್ ಎಸ್ ಹಾಗೂ ಹಿಂದೂ ಮಹಾಸಭಾದವರು ಎಂದು ಸಿದ್ದರಾಮಯ್ಯ ಕಿಡಿಕಾರಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 