ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು: ಪ್ರೊ. ಪ್ರಕಾಶಗೌಡ
We should adopt an eco-friendly lifestyle: Prof. Prakash Gowda
ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು: ಪ್ರೊ. ಪ್ರಕಾಶಗೌಡ
ಕೊಪ್ಪಳ 05: ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಎನ್.ಸಿ.ಸಿ. ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಇರಕಲ್ಲಗಡಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕರಾದ ಪ್ರೊ. ಪ್ರಕಾಶಗೌಡ ಅವರು ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸುವ, ಪರಿಸರ ಸ್ನೇಹಿ ಜೀವನ ಶೈಲಿಯನ್ನು ರೂಢಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಈ ಕಾರ್ಯಕ್ರಮಯ ಆಯೋಜಕರಾದ ಎನ್.ಸಿ.ಸಿ. ವಿಭಾಗದ ಮುಖ್ಯಸ್ಥರಾದ ಮೇಜರ್ ದಯಾನಂದ ಸಾಳುಂಕೆ ಅವರು ಪರಿಸರ ದಿನಾಚರಣೆಯ ಐತಿಹಾಸಿಕ ಮಹತ್ವಗಳನ್ನು ಕುರಿತು ಮಾತನಾಡುತ್ತಾ, ‘ಪರಿಸರ ಉಳಿಸಿ-ಭವಿಷ್ಯ ರಕ್ಷಿಸಿ’ ಎಂಬ ನಂಬಿಕೆಯಿಂದ ಎಲ್ಲರೂ ಕೈ ಜೋಡಿಸೋಣ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಚನ್ನಬಸವ ವಹಿಸಿದ್ದರು. ಕಾರ್ಯಕ್ರಮದಲ್ಲಿ ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಅರುಣಕುಮಾರ ಮತ್ತು ಮಹಾವಿದ್ಯಾಲಯದ ಎಲ್ಲಾ ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 