ಸಂತೋಷ, ಸುಂದರ ಮತ್ತು ನೆಮ್ಮದಿಯಿಂದ ಇರುವಂತೆ ನಮ್ಮ ಜೀವನ ನಡೆಸಬೇಕು: ಓಲೆಮಠದ ಆನಂದ ದೇವರು
We should live our lives in a way that is happy, beautiful and peaceful: Anand Deva of Olemath
ರಾಯಬಾಗ 17: ಜೀವನದಲ್ಲಿ ಯಾವುದೇ ಒತ್ತಡಕ್ಕೆ ಒಳಗಾಗದೇ ಸಂತೋಷ, ಸುಂದರ ಮತ್ತು ನೆಮ್ಮದಿಯಿಂದ ಇರುವಂತೆ ನಮ್ಮ ಜೀವನ ನಡೆಸಬೇಕು ಎಂದು ಜಮಖಂಡಿ ಓಲೆಮಠದ ಆನಂದ ದೇವರು ಹೇಳಿದರು.
ಬುಧವಾರ ಪಟ್ಟಣದ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹೀರಾಬಾಯಿ ಚೌಗುಲೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ 2025-26ನೇ ಸಾಲಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ವರ್ಷ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡೆ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ನಮ್ಮ ಬದುಕನ್ನು ಕಟ್ಟುವ ಶಿಕ್ಷಕರಿಗೆ ಗೌರವ ನೀಡಿ, ಅವರ ಮಾರ್ಗದರ್ಶನದಲ್ಲಿ ಉನ್ನತ ಸಾಧನೆ ಮಾಡಬೇಕು.
ತಂದೆ, ತಾಯಿ, ಶಿಕ್ಷಕರು, ರೈತರು, ಸೈನಿಕರು ನಮ್ಮಗೆ ನಾಯಕರಾಗಬೇಕು ಎಂದು ಹೇಳಿದರು. ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಥಮ ದರ್ಜೆ ಸಹಾಯಕ ಲಕ್ಷ್ಮಣ ಮಾಳಗಿ ಮಾತನಾಡಿದರು.ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಎಲ್.ಬಿ.ಚೌಗುಲೆ ಅಧ್ಯಕ್ಷತೆಯನ್ನು ವಹಿಸಿದ್ದರು. ಬೆಳಗಾವಿ ರಾಣಿ ಚನ್ನಮ್ಮ ವಿ.ವಿ ಸಿಸ್ಟಮ್ ಅಸಿಸ್ಟಂಟ್ ಸದಾಶಿವ ತೋರಿ, ಸಂಸ್ಥೆ ಕಾರ್ಯದರ್ಶಿ ವಿನಯ ಚೌಗುಲೆ, ಉಪನ್ಯಾಸಕರಾದ ಪಿ.ಡಿ.ಲಂಗೋಟೆ, ಶಿವಾಜಿ ಭೋಯಿ, ಕಾವೇರಿ ಪಾಟೀಲ, ಗಜಾನನ ಪೂಜಾರಿ, ಸಂತೋಷಕುಮಾರ ಲಮಾಣಿ, ಕುಮಾರ ಭಜಂತ್ರಿ, ಅಪ್ಪು ಕಾಂಬಳೆ, ಆಶಾ ಕಾಂಬಳೆ, ಸುನೀಲ ಕೋಳಿಗುಡ್ಡೆ, ಎಸ್.ಜಿ.ಶಿಂಧೆ, ರೋಹನ ವಗ್ಗರ, ಸುಮಿತ್ರಾ ಅಲಕನೂರೆ,ಪ್ರಾಚಾರ್ಯ ಎಸ್.ಎಸ್.ದಿಗ್ಗೆವಾಡಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಫೋಟೊ: 17 ರಾಯಬಾಗ 1ಫೋಟೊ ಶೀರ್ಷಿಕೆ: ರಾಯಬಾಗ: ಪಟ್ಟಣದ ಬಿ.ಎ.ಚೌಗುಲೆ ಶಿಕ್ಷಣ ಸಂಸ್ಥೆ ಆವರಣದಲ್ಲಿ ಹೀರಾಬಾಯಿ ಚೌಗುಲೆ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ 2025-26ನೇ ಸಾಲಿನ ಕಲಾ, ವಿಜ್ಞಾನ ಮತ್ತು ವಾಣಿಜ್ಯ ವಿಭಾಗದ ಪ್ರಥಮ ವರ್ಷ ವಿದ್ಯಾರ್ಥಿಗಳ ಸ್ವಾಗತ, ಸಾಂಸ್ಕೃತಿಕ, ಕ್ರೀಡೆ ಮತ್ತು ಎನ್.ಎಸ್.ಎಸ್ ಚಟುವಟಿಕೆಗಳನ್ನು ಗಣ್ಯರು ಉದ್ಘಾಟಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 