‘ದೇಶಕ್ಕಾಗಿ ಬದುಕನ್ನೇ ತ್ಯಾಗಮಾಡಿದ ಪುರುಷರನ್ನು ಸ್ಮರಣೆ ಮಾಡಬೇಕು’
We should remember the men who sacrificed their lives for the country'
ಲೋಕದರ್ಶನ ವರದಿ
‘ದೇಶಕ್ಕಾಗಿ ಬದುಕನ್ನೇ ತ್ಯಾಗಮಾಡಿದ ಪುರುಷರನ್ನು ಸ್ಮರಣೆ ಮಾಡಬೇಕು’
ಬೆಟಗೇರಿ 03: ದೇಶಕ್ಕಾಗಿ ತಮ್ಮ ಬದುಕನ್ನೇ ತ್ಯಾಗಮಾಡಿದ ಮಹಾನ ಪುರುಷರನ್ನು ಪ್ರತಿಯೊಬ್ಬರೂ ಸ್ಮರಣೆ ಮಾಡಬೇಕು. ಭಕ್ತ ಕನಕದಾಸ ಮತ್ತು ಕ್ರಾಂತೀವೀರ ಸಂಗೋಳ್ಳಿ ರಾಯಣ್ಣನವರ ಬದುಕಿನ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಸುಣಧೋಳಿ ಅಭಿನವ ಶಿವಾನಂದ ಮಹಾಸ್ವಾಮೀಜಿ ಹೇಳಿದರು.
ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಭಕ್ತ ಕನಕದಾಸ ಮತ್ತು ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಹಯೋಗದಲ್ಲಿ ಫೆ.1 ರಂದು ನಡೆದ ನೂತನ ಭಕ್ತ ಕನಕದಾಸ ಮತ್ತು ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಕಡಕೋಳದ ಅಭಿನವ ಸಿದ್ದರಾಯಜ್ಜನವರು ದಿವ್ಯ ಸಾನಿಧ್ಯ ವಹಿಸಿದ್ದರು. ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ ಮುಖ್ಯಅತಿಥಿಗಳಾಗಿ ಆಗಮಿಸಿದ್ದರು. ಸ್ಥಳೀಯ ಅಡವಿಸಿದ್ಧೇಶ್ವರ ದೇವಾಲಯದಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸುಮಂಗಲೆಯರಿಂದ ಆರತಿ, ಕುಂಭ ಉತ್ಸವ ಸಕಲ ವಾಧ್ಯಮೇಳಗಳೊಂದಿಗೆ ನೂತನ ಮೂರ್ತಿಗಳ ಭವ್ಯ ಮೆರವಣಿಗೆ ಜರುಗಿತು. ಇಲ್ಲಿಯ ಯುವಕರು ಕಾಲ್ನಡಿಗೆ ಮೂಲಕ ನಂದಗಡದಿಂದ ವೀರಜ್ಯೋತಿ ತರಲಾಯಿತು. ಶ್ರೀಗಳು, ಗಣ್ಯರನ್ನು ಸ್ಥಳೀಯ ಭಕ್ತ ಕನಕದಾಸ ಮತ್ತು ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ ಸತ್ಕರಿಸಿದರು.
ಬಸವಂತ ಕೋಣಿ, ಲಕ್ಷ್ಮಣ ಚಂದರಗಿ, ಹನುಮಂತ ವಡೇರ, ಲಕ್ಕಪ್ಪ ಚಂದರಗಿ, ಮಾರುತಿ ಚಂದರಗಿ, ಅಶೋಕ ಕೋಣಿ, ಸದಾಶಿವ ಕುರಿ, ಲಕ್ಷ್ಮಣ ಸೋಮಗೌಡ್ರ, ಸುಭಾಷ ಕರೆನ್ನವರ, ಸತ್ತೆಪ್ಪ ಹೊರಟ್ಟಿ, ಮಾಯಪ್ಪ ಬಾಣಸಿ, ಈರಯ್ಯ ಹಿರೇಮಠ, ಸಂಗಯ್ಯ ಹಿರೇಮಠ, ಸುರೇಶ ವಡೇರ, ಮುತ್ತೆಪ್ಪ ವಡೇರ, ಸುರೇಶ ಬಾಣಸಿ, ಮುತ್ತೆಪ್ಪ ಕುರುಬರ, ಬೀರ್ಪ ಕುರಬೇಟ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಭಕ್ತ ಕನಕದಾಸ ಮತ್ತು ಕ್ರಾಂತೀವೀರ ಸಂಗೋಳ್ಳಿ ರಾಯಣ್ಣ ಅಭಿಮಾನಿ ಬಳಗದ ಸದಸ್ಯರು, ಪದಾಧಿಕಾರಿಗಳು, ಮತ್ತೀತರರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 