ನುಸುಳುಕೋರರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲ, ದೇಶದಿಂದಲೇ ಹೊರಹಾಕುತ್ತೆವೆ
We will not only remove infiltrators from the voter list, but also from the country itself.
ಗುವಾಹಟಿ: ಭಾರತವು ನಕ್ಸಲರಿಂದ ಮುಕ್ತವಾಗಲು ಸಾಧ್ಯವಾದರೆ, ನುಸುಳುಕೋರರಿಂದಲೂ ಮುಕ್ತವಾಗಲು ಸಾಧ್ಯ ಎಂದು ಪ್ರತಿಪಾದಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಂದಿನ ಐದು ವರ್ಷಗಳಲ್ಲಿ ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಯಿಂದ ಮಾತ್ರವಲ್ಲದೆ ದೇಶದಿಂದಲೇ ಹೊರಹಾಕುತ್ತೇವೆ ಎಂದು ಶನಿವಾರ ಹೇಳಿದ್ದಾರೆ. ಅಸ್ಸಾಂ ಪೊಲೀಸ್‌ನ 10ನೇ ಬೆಟಾಲಿಯನ್‌ನ ಹೊಸ ಕ್ಯಾಂಪಸ್‌ಗೆ ಅಡಿಪಾಯ ಹಾಕಿದ ನಂತರ ಶಾ ಅವರು ಸಭೆಯನ್ನುದ್ದೇಶಿಸಿ ಮಾತನಾಡಿದರು. ನುಸುಳುಕೋರರ ಅತಿಕ್ರಮಣಗಳಿಂದ ಮುಕ್ತವಾದ ಭೂಮಿಯಲ್ಲಿ ಇದನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದ ಶಾ, ನುಸುಳುಕೋರರನ್ನು ಓಡಿಸುವುದಾಗಿ ಈ ಹಿಂದೆ ಕಾಂಗ್ರೆಸ್ ನಾಯಕರು ಹೇಳುತ್ತಿದ್ದರು. ಆದರೆ, ಅವರು ಆ ಕೆಲಸ ಮಾಡಲಿಲ್ಲ. ಏಕೆಂದರೆ, ನುಸುಳುಕೋರರು ಕಾಂಗ್ರೆಸ್‌ನ ವೋಟ್‌ಬ್ಯಾಂಕ್ ಎಂದು ಕುಟುಕಿದರು.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 