ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ’
Wear a helmet and save your life
ಲೋಕದರ್ಶನ ವರದಿ
ಹೂವಿನಹಡಗಲಿ 11: ’ಹೆಲ್ಮೆಟ್ ಧರಿಸದವ ರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಉದ್ದೇಶವಲ್ಲ, ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಆಮೂಲ್ಯ ಜೀವ ಕಾಪಾಡಿಕೊಳ್ಳಲಿ ಎಂಬ ಸದುದ್ದೇಶ ಪೊಲೀಸ್ ಇಲಾಖೆಯದ್ದಾಗಿದೆ ಎಂದು ಪಿಎಸ್‌ಐ ಮಣಿಕಂಠ್ ಹೇಳಿದರು.ಪಟ್ಟಣದಲ್ಲಿ ಪೊಲೀಸ್ ಇಲಾಖೆ ಯಿಂದ ಶುಕ್ರವಾರ ಪೊಲೀಸ್ ಠಾಣೆ ಮುಂಭಾಗ,ಶಾಸ್ತ್ರೀಯ ವೃತ್ತ, ಹಳೆ ಬಸ್ ನಿಲ್ದಾಣದಲ್ಲಿ ಬೈಕ್ ತಡೆದು ಹೆಲ್ಮೆಟ್ ಜಾಗೃತಿ ಮೂಡಿಸಲಾಯಿತು. ಅಪಘಾತ ಸಂದರ್ಭದಲ್ಲಿ ತಲೆಗೆ ಪೆಟ್ಟು ಬೀಳುವುದರಿಂದ ಹೆಚ್ಚಾಗಿ ಜನರು ಪ್ರಾಣ ಕಳೆದುಕೊಳ್ಳತ್ತಿದ್ದಾರೆ . ದ್ವಿಚಕ್ರ ವಾಹನ ಚಾಲನೆಯಲ್ಲಿ ಹೆಲ್ಮೆಟ್ ಧರಿಸಿ ಪ್ರಾಣ ಕಾಪಾಡಿಕೊಳ್ಳಿ ಎಂದರು. ಇದೇ ವೇಳೆ ಎ ಎಸ್ ಐ ನಂದಿನಿ, ಕಾನಸ್ಟೆಬಲ್ ಗುರುಬಸವರಾಜ, ಪರಶುರಾಮ, ಮಲ್ಲೇಶ, ಖಲಂದರ ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 