ಹೇಲ್ಮೇಟ್ ಧರಿಸಿ, ಪ್ರಾಣ ಉಳಿಸಿ : ತಹಶೀಲ್ದಾರ ಮಂಜುನಾಯಕ
Wear a helmet and save your life: Tahsildar Manjunayak
ಲೋಕದರ್ಶನ ವರದಿ
ಕಂಪ್ಲಿ 21 : ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ, ಅವಘತಾದಿಂದಾಗುವ ದುರ್ಘಟನೆಗೆ ಅಂತ್ಯವಾಡಬೇಕು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ಹೇಳಿದರು.ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಹೆಲ್ಮೆಟ್ ಜಾಗೃತಿ ಹಿನ್ನಲೆಯ ಬೈಕ್ ರ್ಯಾಲಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, ದೇಶದಲ್ಲಿ ಪ್ರತಿ ವರ್ಷ ರೋಗ ರುಜಿನಗಳಿಗೆ ಬಲಿಯಾಗುವವರಿಗಿಂತ ರಸ್ತೆ ಅಪಘಾತಗಳಲ್ಲಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಪ್ರಾಣ ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರು. ಪಿಐ ಕೆ.ಬಿ.ವಾಸುಕುಮಾರ ಮಾತನಾಡಿ, ಹೆಲ್ಮೆಟ್ ಧರಿಸದವರನ್ನು ಹಿಡಿದು ದಂಡ ವಿಧಿಸುವುದು ಪೊಲೀಸರ ಶವಲ್ಲ. ಪ್ರತಿಯೊಬ್ಬರೂ ಹೆಲ್ಮೆಟ್ ಧರಿಸಿ ತಮ್ಮ ಅಮೂಲ್ಯ ಜೀವ ಕಾಪಾಡಲಿ ಎಂಬ ಸದುದ್ದೇಶ ಪೊಲೀಸ್ ಇಲಾಖೆಯದ್ದಾಗಿದೆ.
ಯಾವುದೇ ಜನಹಿತಾಸಕ್ತಿಯ ಯೋಜನೆ ಸಾಕಾರವಾಗಲು ಜನರ ಸಹಭಾಗಿತ್ವ ಅತಿ ಮುಖ್ಯ. ಆದ್ದರಿಂದ ಸಾರ್ವಜನಿಕರು ಸ್ವಯಂ ಪ್ರೇರಣೆಯಿಂದ ಹೆಲ್ಮೆಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯ ಕಾರ್ಯಕ್ಕೆ ಕೈಜೋಡಿಸಬೇಕು. ಮನೆಯಲ್ಲಿ ಯಾರೇ ಆದರೂ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿದ್ದರೆ ಅವರನ್ನು ಎಚ್ಚರಿಸುವುದು ಯುವಕರ ಕರ್ತವ್ಯ. ಮುಖ್ಯವಾಗಿ ಯುವಕರು ಮೊದಲು ಹೆಲ್ಮೆಟ್ ಧರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಎಂದರು.ಇಲ್ಲಿನ ಪೊಲೀಸ್ ಠಾಣೆಯಿಂದ ಪ್ರಾರಂಭವಾಗಿ ಬೈಕ್ ರಾ್ಯಲಿ ಜಾಥಾ ಪಟ್ಟಣದ ಪ್ರಮುಖ ರಸ್ತೆಗಲ್ಲಿ ಸಂಚರಿಸಿ, ಕೊಟ್ಟಾಲ್ ರಸ್ತೆ, ಎಪಿಎಂಸಿ, ಮಹಾತ್ಮಗಾಂಧಿ, ಅಂಬೇಡ್ಕರ್ ವೃತ್ತ, ಹೊಸ ಬಸ್ ನಿಲ್ದಾಣ, ನಡುವಲ ಮಸೀದಿ, ಸಂತೆ ಮಾರುಕಟ್ಟೆ, ಸರ್ಕಾರಿ ಆಸ್ಪತ್ರೆ ಮೂಲಕ ಪುನಃ ಪೊಲೀಸ್ ಠಾಣೆಯಲ್ಲಿ ತಲುಪಿತು.ಈ ಸಂದರ್ಭದಲ್ಲಿ ಎಎಸ್ ಐ ಬಸವರಾಜ ಸೇರಿದಂತೆ ಪೊಲೀಸ್, ಮತ್ತು ಗೃಹ ರಕ್ಷಕದಳದ ಸಿಬ್ಬಂದಿ ಪಾಲ್ಗೊಂಡಿದ್ದರು.
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್ 