ದ್ವಿತೀಯ ಪಿಯುಸಿ ಪರೀಕ್ಷೆ-2 ರ ವೆಬ್ ಕಾಸ್ಟಿಂಗ್ ಕೇಂದ್ರ ಪರೀಶೀಲನೆ: ಜಿ.ಪಂ. ಸಿಇಓ ರಿಷಿ ಆನಂದ

Web Casting Central Examination of Secondary PUC Examination-2: G.P. CEO Rishi Anand

ವಿಜಯಪುರ ಏ. 24:  ಜಿಲ್ಲೆಯ 16 ಪರೀಕ್ಷಾ ಕೇಂದ್ರಗಳಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ-2ಗಳು ಜರುಗುತ್ತಿದ್ದು, ಪಾರದರ್ಶಕ ಹಾಗೂ ನಕಲು ಮುಕ್ತವಾಗಿ ನಡೆಸುವ ದೃಷ್ಟಿಯಿಂದ ನಗರದ ಜಿಲ್ಲಾ ಪಂಚಾಯತಿಯ ಸಂಪನ್ಮೂಲ ಕೇಂದ್ರದಲ್ಲಿ ಸ್ಥಾಪಿಸಲಾದ ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಗುರುವಾರ ಭೇಟಿ ನೀಡಿ ಪರೀಶೀಲನೆ ನಡೆಸಿದರು.  

ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರಗಳು, ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ವ್ಯವಸ್ಥೆಗಳು ಮತ್ತು ಇಂಟರ್ನೆಟ್ ವ್ಯವಸ್ಥೆಗಳನ್ನು ವೀಕ್ಷಿಸಿದ ಅವರು, ಯಾವುದೇ ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕು.  ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವ್ಹಿ ಸ್ಥಗಿತಗೊಳ್ಳದಂತೆ ನಿಗಾ ವಹಿಸಬೇಕು.  ಒಂದು ವೇಳೆ ಸಿಸಿಟಿವ್ಹಿಗಳು ಸ್ಥಗಿತಗೊಂಡಿದ್ದಲ್ಲಿ ತುರ್ತಾಗಿ ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ಅತೀ ಸೂಕ್ಷ್ಮ ಪರೀಕ್ಷಾ ಕೇಂದ್ರಗಳಲ್ಲಿ ನಿಗಾವಹಿಸಬೇಕು. ಪರೀಕ್ಷೆಗಳಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ಕಟ್ಟು-ನಿಟ್ಟಾಗಿ  ಮತ್ತು ಶಿಸ್ತಿನಿಂದ ನಡೆಸುವುದು. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಸಮಸ್ಯೆಗಳು ಉಂಟಾಗದಂತೆ, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಆಸನಗಳ ಮಧ್ಯದಲ್ಲಿ ಹೆಚ್ಚಿನ ಅಂತರ ಕಾಯ್ದುಕೊಳ್ಳಬೇಕು. ಎಲ್ಲಾ ಕೇಂದ್ರಗಳಿಗೆ ಭದ್ರತೆ ಒದಗಿಸುವುದು, ವಿದ್ಯಾರ್ಥಿಗಳು ಭಯ ಮುಕ್ತ ಮತ್ತು ಪ್ರಶಾಂತ ವಾತಾವರಣದಲ್ಲಿ ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ವ್ಯವಸ್ಥೆ ಮಾಡಬೇಕು ಇದಕ್ಕೆ ಪೂರಕವಾಗಿ ಎಲ್ಲಾ ಅಗತ್ಯ ಕ್ರಮಗಳನ್ನು ವಹಿಸಬೇಕು ಎಂದು ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಅಧಿಕಾರಿಗಳು ಹಾಗೂ ವೆಬ್ ಕಾಸ್ಟಿಂಗ್ ಕೇಂದ್ರದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರಾದ ಬಿ. ಎಸ್‌. ರಾಠೋಡ,  ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆಯ ಉಪನಿರ್ದೇಶಕರಾದ ಡಾ. ಸಿ. ಕೆ. ಹೊಸಮನಿ, ಜಿಲ್ಲಾ ವೆಬ್ ಕಾಸ್ಟಿಂಗ್ ಕೇಂದ್ರದ ನೋಡಲ್ ಅಧಿಕಾರಿಗಳಾದ ಎಮ್‌. ಬಿ. ಕನ್ನೂರ, ಉಪನ್ಯಾಸಕರಾದ ಸುಧೀರಗೌಡ ಬಿರಾದಾರ, ರಾಜಶೇಖರ ರಾಠೋಡ, ಬಿ. ಜಿ. ಹೂಗಾರ, ಜಿಲ್ಲಾ ಪಂಚಾಯತಿಯ ಡಿ.ಪಿ.ಎಮ್‌. ಅರವಿಂದ ಬಿರಾದಾರ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ಉಪಸ್ಥಿತರಿದ್ದರು.