ಬೆಳಗಾವಿ : ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ನಡೆಯು ಅಧಿವೇಶನಕ್ಕಾಗಿ ಹಲವಾರು ಇಲಾಖೆಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಇದರ ಕುರಿತು ತನಿಖೆ ನಡೆಸುವಂತೆ ಸರಕಾರ ಸೂಚಿಸಿದರು ಬೆಳಗಾವಿ ಜಿಲ್ಲಾಡಳಿತ ಹಿಂದೇಟು ಹಾಕುತ್ತಿದೆ ಎಂದು ಮೂಡಲಗಿಯ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಗಂಭೀರವಾದ ಆರೋಪ ಮಾಡಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಗಡಾದ ಅವರು, ಬೆಳಗಾವಿಯ ಚಳಿಗಾಲ ಅಧಿವೇಶನಕ್ಕೆ ಪೌರಾಡಳಿತದಿಂದ 50 ಸಾವಿರ, ತಾಪಂಗಳಿಂದ 50 ಸಾವಿರ ಹೀಗೆ ಹಲವಾರು ಇಲಾಖೆಗಳಿಂದ ಹಪ್ತಾ ವಸೂಲಿ ಮಾಡಲಾಗುತ್ತಿದೆ.
ಈ ಕುರಿತು ತಾವು ಸರಕಾರಕ್ಕೆ ಪತ್ರ ಬರೆದಿದ್ದು, ಇದರ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿ ಗಳಿಗೆ ಸರಕಾರದಿಂದ ಪತ್ರ ಬಂದಿದ್ದರೂ ಜಿಲ್ಲಾಡಳಿತ ತನಿಖೆಗೆ ಹಿಂದೇಟು ಹಾಕಿರುವದು ಹಲವಾರು ಅನುಮಾನಕ್ಕೆ ಎಡೆ ಮಾಡಿದೆ ಎಂದರು.