ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಿ.ಕಾಂ. ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ
Welcome program for B.Com. students at Basaveshwara Commerce College
ಲೋಕದರ್ಶನ ವರದಿ
ಬಾಗಲಕೋಟೆ 06 : ವಾಣಿಜ್ಯ ಶಿಕ್ಷಣವು ಕೇವಲ ಲೆಕ್ಕಪತ್ರಗಳ ಅಧ್ಯಯನಕ್ಕೆ ಸೀಮಿತವಾಗಿಲ್ಲ. ಉದ್ಯಮಶೀಲತೆ, ಹಣಕಾಸು ನಿರ್ವಹಣೆ, ಡಿಜಿಟಲ್ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಹಾಗೂ ಜಾಗತಿಕ ಮಾರುಕಟ್ಟೆಯ ಅರಿವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕು. ಶಿಸ್ತು ಮತ್ತು ಸಮಯಪಾಲನೆಯಿಂದ ಯಶಸ್ಸು ಸಾಧ್ಯ ಎಂದು ಪ್ರಾಚಾರ್ಯರಾದ ಡಾ. ಜಗನ್ನಾಥ್ ವಿ. ಚವ್ಹಾಣ ಹೇಳಿದರು. ನಗರದ ಬಿವಿವಿ ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ "ನವಯಾನ" ಬಿ.ಕಾಂ. ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳ ಜೀವನದಲ್ಲಿ ಶಿಸ್ತು ಮತ್ತು ಶಿಕ್ಷಣದ ಅರಿವು ಮಹತ್ವದ್ದಾಗಿದ್ದು, ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಅವಮಾನ, ಬಡತನ, ಹಸಿವು ಹಾಗೂ ಸೋಲು ಎಂಬ ನಾಲ್ಕು ಅನುಭವಗಳು ಇದ್ದಾಗ ಮಾತ್ರ ಯಶಸ್ಸಿನ ಮೌಲ್ಯದ ಅರಿವಾಗುತ್ತದೆ. ಜಾತಿ, ಧರ್ಮದಿಂದ ಗೆಲುವು ನಿರ್ಧಾರ ವಾಗುವುದಿಲ್ಲ ಅದು ಪರಿಶ್ರಮದ ಫಲವಾಗಿರುತ್ತದೆ ನಿರಂತರ ಪ್ರಯತ್ನದಿಂದ ಅವಮಾನವೂ ಒಂದು ದಿನ ಸನ್ಮಾನವಾಗಿ ಬದಲಾಗುತ್ತದೆ ಎಂದರು.
ನೂತನವಾಗಿ ಮಹವಿದ್ಯಾಲಯಕ್ಕೆ ಆಗಮಿಸಿದ ವಿದ್ಯಾರ್ಥಿಗಳು ಹಿರಿಯರನ್ನು ಹಾಗೂ ಶಿಕ್ಷಕರನ್ನು ಗೌರವಿಸಿ, ಉತ್ತಮ ಸ್ನೇಹ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು. ಪ್ರತಿಯೊಂದು ದಿನವೂ ಹೊಸದನ್ನು ಕಲಿಯುವ ಅವಕಾಶವೆಂದು ಪರಿಗಣಿಸಿ ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಜೀವನದಲ್ಲಿ ಉನ್ನತ ಸಾಧಕರಾಗುತ್ತೀರಿ ಮಹಾವಿದ್ಯಾಲಯವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಗತ್ಯವಾದ ಎಲ್ಲ ಅವಕಾಶಗಳನ್ನು ಕಲ್ಪಿಸುತ್ತಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಂಡು ಉಜ್ವಲ ಭವಿಷ್ಯವನ್ನು ನಿರ್ಮಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.
ಸ್ವಾಗತ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಓಟ, ವಾಲಿಬಾಲ್ ಹಾಗೂ ವಿದ್ಯಾರ್ಥಿನಿಯರಿಗಾಗಿ ಮ್ಯೂಸಿಕಲ್ ಚೇರ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಂಧರ್ಭದಲ್ಲಿ ಐಕ್ಯೂಎಸಿ ಘಟಕದ ಸಂಯೋಜಕರಾದ ಜಿ.ಎಂ.ನಾವಡಗಿ, ಸಾಂಸ್ಕೃತಿಕ ಸಮಿತಿಯ ಅಧ್ಯಕ್ಷರಾದ ಡಾ. ಬಿ. ವಿ. ಖೋತ್, ಪ್ರಾಧ್ಯಾಪಕರಾದ ಡಾ. ಎಂ. ನಂಜುಂಡಸ್ವಾಮಿ, ಆರ್. ಪಿ. ಮೆಳಿನಮನಿ, ಕೆ. ಎಸ್. ಅರಬ್ಬಿ, ಎಂ. ಎಂ. ಮುದುಕಮ್ಮನವರ, ಪಿ. ಎನ್. ರಾಥೋಡ್, ಡಾ. ಎಸ್. ಎಸ್. ಕೋಟ್ಯಾಲ್, ವಿದ್ಯಾರ್ಥಿ ಪ್ರತಿನಿಧಿ ವಿದ್ಯಾ ಪಾಟೀಲ್, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 