ವಿದ್ಯಾರ್ಥಿಗಳಿಗೆ ಹೂ, ಸಿಹಿ ನೀಡಿ ಸ್ವಾಗತ
ಹಾರೂಗೇರಿ : ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಶುಕ್ರವಾರ ಆರಂಭಗೊಂಡಿದ್ದು, ಪಟ್ಟಣದ ಶ್ರೀ ವೃಷಭೇಂದ್ರ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಪರೀಕ್ಷಾ ಕೇಂದ್ರಕ್ಕೆ ಮೊದಲ ಕನ್ನಡ ಭಾಷೆ ಪತ್ರಿಕೆ ಬರೆಯಲು ಆಗಮಿಸಿದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಮುಖ್ಯಸ್ಥ ಟಿ.ಬಿ.ಸಾಜನೆ ಹಾಗೂ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆರ್.ಎ.ಭಾವಿ ಅವರು ಗುಲಾಬಿ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು. ಬಳಿಕ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಆರ್.ಎ.ಭಾವಿ ಮಾತನಾಡಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನ ಒಂದು ಪ್ರಮುಖ ಘಟ್ಟವಾಗಿದೆ. ಪರೀಕ್ಷೆಯನ್ನು ಮಕ್ಕಳು ಯಾವುದೇ ಭಯಭೀತಿ ಇಲ್ಲದೇ ಹಬ್ಬದಂತೆ ಆಚರಿಸಬೇಕು. ವಿದ್ಯಾರ್ಥಿಗಳು ಉತ್ಸಾಹ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯಬೇಕು ಎಂದರು. ಪರೀಕ್ಷಾ ಕೇಂದ್ರದಲ್ಲಿ ಒಟ್ಟು 474 ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಪರೀಕ್ಷಾ ಕೇಂದ್ರದಲ್ಲಿ ಸುವ್ಯವಸ್ಥಿತ ಆಸನ ವ್ಯವಸ್ಥೆ, ಪ್ರತಿ ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಕೆ, ಶುದ್ಧ ಕುಡಿಯುವ ನೀರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯಕ್ಕೆ ಯಾವುದೇ ತೊಂದರೆಯಾಗದಂತೆ ಸಂಚರಿಸಲು ಸಾರಿಗೆ ಇಲಾಖೆ ಬಸ್‌ಗಳ ವ್ಯವಸ್ಥೆ ಕೈಗೊಳ್ಳಲಾಯಿತು.