ಸಿಎಂ ಯಡಿಯೂರಪ್ಪರವರಿಗೆ ಗೌರವ ಪೂರ್ವಕ ಸ್ವಾಗತ

ಕೊಪ್ಪಳ 26: ಕನರ್ಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಫೆ.26) ಕೊಪ್ಪಳ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಪೊಲೀಸ್ ಕವಾಯಿತಿನ ಮೂಲಕ ಗೌರವ ಪೂರ್ವಕವಾಗಿ ಅವರನ್ನು ಸ್ವಾಗತಿಸಲಾಯಿತು.  

ಕುಕನೂರು ತಾಲ್ಲೂಕಿನ ಮಸಬಹಂಚಿನಾಳ ಗ್ರಾಮದಲ್ಲಿ ನಡೆದ ಯಲಬುರ್ಗಾ ಶಾಸಕ ಹಾಲಪ್ಪ ಬಸಪ್ಪ ಆಚಾರ ಅವರ ಕುಟುಂಬದ ವಿವಾಹ ಮಹೋತ್ಸವ ಸಮಾರಂಭದಲ್ಲಿ ಭಾಗಹಿಸುವ ನಿಮಿತ್ತ ಮುಖ್ಯಮಂತ್ರಿಗಳು ಕೊಪ್ಪಳ ಜಿಲ್ಲೆಯ ಕುಕನೂರಿನ ವಿದ್ಯಾನಂದ ಗುರುಕುಲ ಶಿಕ್ಷಣ ಸಂಸ್ಥೆ ಹೆಲಿಪ್ಯಾಡ್ಗೆ ಆಗಮಿಸಿದ ಸಂದರ್ಭ ಪೊಲೀಸ್ ಕವಾಯಿತಿನ ಮೂಲಕ ಗೌರವಪೂರ್ವಕ ಸ್ವಾಗತ ಮಾಡಲಾಯಿತು. ನಂತರ ಮುಖ್ಯಮಂತ್ರಿಗಳು ಸುದ್ದಿಗಾರರೊಂದಿಗೆ ಮಾತನಾಡಿದರು. 

ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು ಸೇರಿದಂತೆ ಹಲವು ಗಣ್ಯರು ಮುಖ್ಯಮಂತ್ರಿಗಳಿಗೆ ಹೂ ಗುಚ್ಛ ನೀಡಿ ಸ್ವಾಗತಿಸಿದರು.  

ಇದೇ ಸಂದರ್ಭದಲ್ಲಿ ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಎಂ. ನಂಜುಂಡಸ್ವಾಮಿ, ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ರಘುನಂದನ್ ಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ, ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.