ಮಹಿಳಾ ರಥೋತ್ಸವಕ್ಕೆ ಸ್ವಾಗತ - ಮಹಾದೇವ ಶ್ರೀ
Welcome to the Women's Chariot Festival – Mahadeva Shree
ಕುಕನೂರ ಸೆ 07: ಮುಂಡರಗಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಸ್ಥಾನಮಠದ ಕುಕನೂರು ಶಾಖಾಮಠದ ವತಿಯಿಂದ ಶ್ರೀ ಜಗದ್ಗುರು ಅನ್ನದಾನೀಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಸೆಪ್ಟೆಂಬರ್ 8ರಂದು ಸಂಜೆ 5 ಗಂಟೆಗೆ ಮಹಿಳಾ ರಥೋತ್ಸವ ಭಕ್ತಿಭಾವದಿಂದ ನಡೆಯಲಿದೆ.ಈ ಬಾರಿಯ ಮಹಿಳಾ ರಥೋತ್ಸವವು ಹಲವು ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಮಹಿಳೆಯರಿಗೆ ಉಡಿತುಂಬುವ ಕಾರ್ಯಕ್ರಮ, ಬಳೆಯಿಡಿಸುವ ಕಾರ್ಯಕ್ರಮ ಹಾಗೂ ಬಾಗಿನ ನೀಡುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಿಳೆಯರ ಸೌಭಾಗ್ಯ, ಸಮೃದ್ಧಿ ಮತ್ತು ಕುಟುಂಬದ ಮಂಗಳಕ್ಕಾಗಿ ನಡೆಯುವ ಈ ಸಂಪ್ರದಾಯಬದ್ಧ ಕಾರ್ಯಕ್ರಮಗಳು ವಿಶೇಷ ಆಕರ್ಷಣೆಯಾಗಲಿವೆ.
ಇದರ ಜೊತೆಗೆ ಮಹಿಳಾ ಕುಂಭೋತ್ಸವವೂ ನಡೆಯಲಿದ್ದು, ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ತಲೆಯ ಮೇಲೆ ಪೂರ್ಣಕುಂಭ ಹೊತ್ತು ಭಕ್ತಿಭಾವದಿಂದ ಪಾಲ್ಗೊಳ್ಳಲಿದ್ದಾರೆ. ಕುಂಭೋತ್ಸವದ ಮೂಲಕ ಭಕ್ತಿ, ಶ್ರದ್ಧೆ ಹಾಗೂ ಮಹಿಳಾ ಶಕ್ತಿಯ ವೈಭವವನ್ನು ಸಾರಲಾಗುವುದು.ಜಾತ್ರಾ ಮಹೋತ್ಸವದ ಅಂಗವಾಗಿ ಅಯ್ಯಾಚಾರ ಹಾಗೂ ಲಿಂಗದೀಕ್ಷಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೂ ನಡೆಯಲಿವೆ. ರಥೋತ್ಸವದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಶ್ರೀ ಅನ್ನದಾನೀಶ್ವರ ಸ್ವಾಮಿಗಳ ಆಶೀರ್ವಾದ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಠದ ಪೂಜ್ಯ ಮಹಾದೇವ ಸ್ವಾಮೀಜಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 