ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ಸ್ವಾಗತ; ಈರಣ್ಣಾ ಕಡಾಡಿ
Welcome to the selection of BJP candidates; Iranna Kadadi
ಬೆಳಗಾವಿ 08: ತಮ್ಮ ರಾಜ್ಯಸಭಾ ಸದಸ್ಯತ್ವದ ಅವಧಿ ಇದೇ ತಿಂಗಳ 25ರಂದು ಮುಕ್ತಾಯಗೊಳ್ಳಲಿದ್ದು, ನೂತನ ರಾಜ್ಯಸಭಾ ಸದಸ್ಯರಾಗಿ ಧಾರವಾಡದ ಹಾಲುಮತದ ಎಂ. ನಾಗರಾಜ್ ಅವರನ್ನು ಆಯ್ಕೆ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ಬೆಳಗಾವಿ ನಗರದ ಸರ್ಕಿಟ್ ಹೌಸ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷವು ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡುವ ಪರಂಪರೆಯನ್ನು ಮುಂದುವರಿಸಿದ್ದು, ಎಂ. ನಾಗರಾಜ್ ಅವರ ಜೊತೆಗೆ ವಿಧಾನಪರಿಷತ್ತಿಗೆ ಲಿಂಗಾಯತ ಸಮಾಜದ ಲಿಂಗರಾಜ್ ಪಾಟೀಲ್ ಹಾಗೂ ಮೈಸೂರಿನ ಮಡಿವಾಳ ಸಮಾಜದ ರಘು ಕೌಟಿಲ್ಯ ಅವರನ್ನು ಆಯ್ಕೆ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದರು.
ತಾವು ಕೂಡ ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷದಲ್ಲಿ ಬೆಳೆದು ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಬಿ.ಎಲ್. ಸಂತೋಷ, ಪ್ರಹ್ಲಾದ ಜೋಶಿ ಹಾಗೂ ಬಿ.ಎಸ್. ಯಡಿಯೂರ್ಪ ಅವರು ರಾಜ್ಯಸಭಾ ಸದಸ್ಯರಾಗಿ 6 ವರ್ಷ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.ತಮ್ಮ ಆರು ವರ್ಷಗಳ ಅವಧಿಯಲ್ಲಿ ?23.53 ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ ಅವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರಿಡುವ ಹಾಗೂ ಅವರ ಪ್ರತಿಮೆ ಸ್ಥಾಪಿಸುವ ಯೋಜನೆ ಅಂತಿಮ ಹಂತದಲ್ಲಿದೆ ಎಂದರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರ ನಿರ್ಣಯ ಅಂಗೀಕಾರದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬುದು ಸರ್ವಕಾಲಿಕ ಸತ್ಯ. ಅದನ್ನು ಮತ್ತೆ ಮತ್ತೆ ಒತ್ತಿ ಹೇಳುವ ಅಗತ್ಯವಿಲ್ಲ. ಮಹಾನಗರ ಪಾಲಿಕೆಯಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಈ ವಿಷಯವನ್ನು ಮಹಾಪೌರರು, ಉಪಮಹಾಪೌರರು ಹಾಗೂ ಶಾಸಕರು ಚರ್ಚಿಸಿ ನಿರ್ಧರಿಸಲಿದ್ದಾರೆ”ಎಂದು ಹೇಳಿದರು. ಈ ವೇಳೆ ಉಪ ಮಹಾಪೌರ ಹಣಮಂತ ಕೊಂಗಾಡಿ, ರಾಜ್ಯ ಮಾಧ್ಯಮ ಸಲಹೆಗಾರ ಎಫ್ ಎಸ್ ಸಿದ್ದನಗೌಡರ, ನಗರಸೇವಕ ರಾಜಶೇಖರ ಡೋಣಿ,ಬಸವರಾಜ ಕಡಾಡಿ, ಈರಯ್ಯಾ ಖೋತ್, ಬಾರಕರ್, ಮಹಾದೇವ ರಾಥೋಡ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 