ನಗರಸಭಾ ಅಧ್ಯಕ್ಷ ಪಟೇಲರಿಗೆ ವೆಲ್ಫೇರ್ ಪಾರ್ಟಿ ಸನ್ಮಾನ
ಕೊಪ್ಪಳ 22: ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯದ ರಾಜ್ಯ ಅಧ್ಯಕ್ಷರಾದ ತಾಹಿರ್ ಹುಸೇನ್ ಇತ್ತೀಚಿಗೆ ಕೊಪ್ಪಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸನ್ಮಾನಿಸಿ ಶುಭ ಕೋರಿದರು. ನಂತರ ಮಾತನಾಡಿ ನಗರದ ಸರ್ವಾಂಗಿಯಣ ಅಭಿವೃದ್ಧಿಗಾಗಿ ಶ್ರಮಿಸಬೇಕು ಜನರ ಸಮಸ್ಯೆಗಳಿಗೆ ನೇರ ಸ್ಪಂದನೆ ನೀಡಿ ಅವರ ಬೇಕು ಬೇಡಿಕೆಗಳ ಈಡೇರಿಕೆಗಾಗಿ ಕೈಗೊಳ್ಳುವ ಕಾರ್ಯಗಳಿಗೆ ನಮ್ಮ ಪಕ್ಷದ ಸಂಪೂರ್ಣ ಬೆಂಬಲ ತಮಗೆ ಇದೆ ಎಂದು ರಾಜ್ಯಾಧ್ಯಕ್ಷರು ತಿಳಿಸಿ ನಗರಸಭೆಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಕ್ಕೆ ಅಮ್ಜದ್ ಪಟೇಲ್ ಅವರನ್ನು ಅವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ವೆಲ್ಫೇರ್ ಪಕ್ಷದ ರಾಜ್ಯ ಕಾರ್ಯದರ್ಶಿ ಆಸಿಫ್ ಬಿಳೆಕುದುರೆ, ರಾಜ್ಯ ಮಾಧ್ಯಮ ಕಾರ್ಯದರ್ಶಿ ರಿಜ್ವಾನ್ ತಾಜ್ ಪಕ್ಷದ ಕೊಪ್ಪಳ ಜಿಲ್ಲಾ ಅಧ್ಯಕ್ಷ ಆದಿಲ್ ಪಟೇಲ್ ರಾಜ್ಯ ಕಾರ್ಯಕಾರಣಿ ಮಂಡಳಿ ಸದಸ್ಯ ಮೊಹಮ್ಮದ್ ಅಲಿಮುದ್ದೀನ್ ಜಿಲ್ಲಾ ಉಪಾಧ್ಯಕ್ಷ ಹಾಸುನುದ್ದಿನ ಆಲಂಬರದಾರ್, ಉಪಾಧ್ಯಕ್ಷ ಮಹಬೂಬ್ ಸಾಬ್, ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.