ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ವೆಲ್ಫೇರ್ ಪಾರ್ಟಿ ಬೆಂಬಲ
Welfare Party support for All India General Strike
ಬೆಂಗಳೂರು 07: ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ, ರೈತ ವಿರೋಧಿ ಕಾನೂನುಗಳ ರದ್ದತಿಗೆ ಒತ್ತಾಯಿಸಿ, ಜುಲೈ 09ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಸಂಪೂರ್ಣ ಬೆಂಬಲ ನೀಡಲಿದೆ ಎಂದು ವೆಲ್ಫೇರ್ ಪಾರ್ಟಿ ರಾಜ್ಯ ಅಧ್ಯಕ್ಷರು ಅಡ್ವೋಕೇಟ್ ತಾಹೇರ್ ಹುಸೇನ್ ರವರು ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಹೇಳಿದ್ದಾರೆ.
ದುಡಿಯುವ ವರ್ಗಗಳ ಕಲ್ಯಾಣಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾನೂನುಗಳನ್ನು ಜಾರಿ ಮಾಡದೆ ಕಾರ್ಮಿಕ ವಿರೋಧಿ, ರೈತ ವಿರೋಧಿ, ಜನ ವಿರೋಧಿ ನೀತಿಗಳ ಕಾನೂನು ಜಾರಿ ಮಾಡಿ ದುಡಿಯುವ ವರ್ಗಗಳ ಜನರನ್ನು ಸಂಕಷ್ಟಕ್ಕೀಡು ಮಾಡುತ್ತಿದ್ದು ಈ ಕಾನೂನುಗಳ ರದ್ದತಿಗಾಗಿ ಜುಲೈ 9ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಸಲಾಗುತಿದ್ದು ವೆಲ್ಫೇರ್ ಪಾರ್ಟಿ ಈ ಮುಷ್ಕರಕ್ಕೆ ತನ ಬೆಂಬಲ ನೀಡಲಿದೆ.ಕೇಂದ್ರ ಸರ್ಕಾರ ನಾಲಕ್ಕು ಹೊಸ ಕಾರ್ಮಿಕ ಕಾನೂನು ಗಳು ತರಲಿಕ್ಕೆ ಹೊರಟಿದ್ದೆ ಈ ಕಾನೂನು ಗಳು ಕಾರ್ಮಿಕರ ವಿರೋಧಿಯಾಗಿದ್ದು ಯಾವುದೇ ಕಾರಣಕ್ಕೂ ಇದನ್ನು ಜಾರಿಗೆ ತರಬಾರದು ಎಂದು ಅವರು ಹೇಳಿದರು.
ಈ ಬೇಡಿಕೆಗಳಷ್ಟೇ ಅಲ್ಲದೆ ನೂತನ ಶಿಕ್ಷಣ ನೀತಿ, ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ, ಕೆಲಸದ ಅವಧಿ 12ಗಂಟೆಗೆ ವಿಸ್ತರಣೆ ಸೇರಿ ವಿವಿಧ ಆದೇಶಗಳನ್ನು ಧಿಕ್ಕರಿಸಿ ದೇಶದ ಎಲ್ಲ ಭಾಗಗಳಲ್ಲಿ ಮುಷ್ಕರ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಪಕ್ಷದ ಕಾರ್ಯಕರ್ತರು ಕೂಡ ಮುಷ್ಕರದಲ್ಲಿ ಭಾಗವಹಿಸಲಿದ್ದಾರೆ, ಸಾವಿರಾರು ಸಂಖ್ಯೆಯಲ್ಲಿ ಕಾರ್ಮಿಕರು, ದುಡಿಯುವ ವರ್ಗದವರು, ರೈತರು ಈ ಮುಷ್ಕರದಲ್ಲಿ ಭಾಗವಹಿಸುವ ಮೂಲಕ ಮುಷ್ಕರವನ್ನು ಯಶಸ್ವಿಗೊಳಿಸಬೇಕು ಎಂದರು ಅವರು ಕರೆ ನೀಡಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 