ನವದೆಹಲಿ, ಮೇ 26,ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತದಿಂದ ಉಂಟಾಗಿರುವ ಹಾನಿಯ ವ್ಯಾಪ್ತಿಯನ್ನು ನಿರ್ಣಯಿಸಲು ಸರ್ಕಾರ ಶೀಘ್ರದಲ್ಲೇ ಕೇಂದ್ರ ತಂಡವನ್ನು ಕಳುಹಿಸುತ್ತಿದೆ. ಪರಿಹಾರ ಮತ್ತು ಪುನರ್ವಸತಿಗೆ ಸಂಬಂಧಿಸಿದ 'ಎಲ್ಲ ಸಹಾಯ' ಮಾಡುವುದಾಗಿ ಕೇಂದ್ರವು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದೆ ಎಂದು ಅಧಿಕೃತ ಮೂಲಗಳು ಮಂಗಳವಾರ ತಿಳಿಸಿವೆ."ವಿದ್ಯುತ್ ಮತ್ತು ಟೆಲಿಕಾಂ ಸೇವೆಗಳನ್ನು ಪುನಃಸ್ಥಾಪಿಸಲು ಆದ್ಯತೆ ನೀಡಲಾಗುವುದು, ಇದು ರಾಜ್ಯವನ್ನು ಸಾಮಾನ್ಯ ಸ್ಥಿತಿಗೆ ಮರಳಲು ಸಹಾಯ ಮಾಡುತ್ತದೆ" ಎಂದು ಮೂಲಗಳು ತಿಳಿಸಿವೆ.ಇದೇ ತಿಂಗಳ 2 ರಂದು ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಅಂಫಾನ್ ಅಪ್ಪಳಿಸಿತ್ತು. ತತ್ಪರಿಣಾಮ ಪಶ್ಚಿಮ ಬಂಗಾಳದಲ್ಲಿ 86 ಜನರು ಮೃತಪಟ್ಟಿದ್ದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೊಡನೆ ಚಂಡಮಾರುತ ಪೀಡಿತ ಸ್ಥಳಗಳ ವೈಮಾನಿಕ ಸಮೀಕ್ಷೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ತತ್ ಕ್ಷಣದ ಪರಿಹಾರವಾಗಿ ಒಂದು ಸಾವಿರ ಕೋಟಿ ರೂಪಾಯಿಗಳ ನೆರವು ಘೋಷಿಸಿದ್ದರು.