ನವದೆಹಲಿ, ಏ.27, ವಿಕೆಟ್ ಕೀಪಿಂಗ್ ಮಾಡುವಾಗ ನಾನು ಒತ್ತಡಕ್ಕೆ ಒಳಗಾದಂತೆ ಕಂಡು ಬಂದಿತು. ಇದಕ್ಕೆ ಕಾರಣ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಸ್ಥಾನ ತುಂಬವುದು ನಿಜಕ್ಕೂ ಒತ್ತಡ ಇರುತ್ತದೆ ಎಂದು ಭಾರತ ತಂಡದ ಸ್ಟಾರ್ ಆಟಗಾರ ಕೆ.ಎಲ್ ರಾಹುಲ್ ತಿಳಿಸಿದ್ದಾರೆ. ಅನುಭವಿ ವಿಕೆಟ್ ಕೀಪರ್ ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ರಾಹುಲ್ ವಿಕೆಟ್ ಕೀಪರ್ ಆಗಿ ಕೆಲವು ಸರಣಿ ಆಡಿದ್ದಾರೆ. ಕಳೆದ ವರ್ಷ ಐಸಿಸಿ ವಿಶ್ವಕಪ್ ನಂತರ ರಾಹುಲ್ ಟೀಮ್ ಇಂಡಿಯಾಕ್ಕೆ ಸೇರ್ಪಡೆಗೊಂಡರು ಮತ್ತು ಅವರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ರೂಪ ಗೊಳ್ಳುತ್ತಿದ್ದಾರೆ. ಈ ವರ್ಷ ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ 20 ಪಂದ್ಯಗಳಲ್ಲಿ ರಾಹುಲ್ ಸಾಕಷ್ಟು ಉತ್ತಮ ಪ್ರದರ್ಶನ ನೀಡಿದ್ದರು. ಸ್ಟಾರ್ ಸ್ಪೋರ್ಟ್ಸ್ ಶೋ ಕ್ರಿಕೆಟ್ ಕನೆಕ್ಟೆಡ್ ನಲ್ಲಿ ರಾಹುಲ್, “ನಾನು ಬಹಳ ಸಮಯದಿಂದ ವಿಕೆಟ್ ಕೀಪಿಂಗ್ ಮಾಡುತ್ತಿದ್ದೇನೆ. ನಾನು ಐಪಿಎಲ್ ಮತ್ತು ಕರ್ನಾಟಕ ಪರ ವಿಕೆಟ್ ಕೀಪಿಂಗ್ ಮಾಡಿರುತ್ತೇನೆ ಆದರೆ ಪ್ರೇಕ್ಷಕರ ಒತ್ತಡದಿಂದಾಗಿ, ಭಾರತದ ಪರ ವಿಕೆಟ್ ಕೀಪರ್ ಆಗಿ ಆಡುವುದು ಕೊಂಚ ಕಷ್ಟ” ಎಂದಿದ್ದಾರೆ.