ಪತಿ ಮದ್ಯೆ ಸೇವನೆಗೆ ಬೇಸತ್ತು ಪತ್ನಿ ಆತ್ಮಹತ್ಯೆ

ರಾಣಿಬೆನ್ನೂರ:17 ಪತಿ ಮದ್ಯೆ ಸೇವನೆ ಮಾಡುವುದನ್ನು ಬಿಡುತ್ತಿಲ್ಲ ಎಂದು ಅದನ್ನೇ ಮನಸ್ಸಿಗೆ ಬೇಸರ ಮಾಡಿಕೊಂಡು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲ್ಲೂಕಿನ ಚಳಗೇರಿ ಗ್ರಾಮದಲ್ಲಿ ಸಂಭವಿಸಿದೆ.  

ಪ್ರೇಮಾ ಕೋಂ ಬಸಪ್ಪ ತೆಗ್ಗಿನ (45 )ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಇವರು ಜೂ.13 ರಂದು ವಿಷಸೇವನೆ ಘಟನೆ ನಡೆದ ಕೂಡಲೇ ಉಪಚಾರಕ್ಕೆಂದು ನಗರದ ಸರ್ಕಾರಿ ಆಸ್ಪತೆಯಲ್ಲಿ ಚಿಕಿತ್ಸೆ ಪಡೆದು, ನಂತರ ಹೆಚ್ಚಿನ ಚಿಕಿತ್ಸೆಗೆ ದಾವಣಗೆರೆ ಸಿಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಜೂ.14 ರಂದು ಸಾವನ್ನಪ್ಪಿದ್ದಾಳೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ