ಜಲಾಶಯದ ನೀರಿನಲ್ಲಿ ಕಾಡಾನೆ ಸಾವು
Wild elephant dies in reservoir water
ದಾಂಡೇಲಿ ಮೆ 26: ದಾಂಡೇಲಿ ಸಮೀಪದ ಬೊಮ್ಮನಹಳ್ಳಿ ಜಲಾಶಯದ ನೀರಿನಲ್ಲಿ ಕಾಡಾನೆಯೊಂದು ಮೃತಪಟ್ಟಿದೆ. ಕಾಡಾನೆಗೆ 24 ವರ್ಷ ವಯಸ್ಸಾಗಿದ್ದು, ಮೃತ ಆನೆ ಗಂಡಾನೆಯಾಗಿದೆ. ಆನೆ ನೀರಿನಲ್ಲಿ ಸಾವನ್ನಪ್ಪಿರುವದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರೀಶೀಲನೆ ನಡೆಸಿದರು. ನಂತರ ಆನೆಯ ಮೃತ ದೇಹವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ನಿಖರ ಕಾರಣ ತಿಳಿದು ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ನಂತರ ಸಾವೀಗೀಡಾದ ಆನೆಯ ಅಂತ್ಯ ಸಂಸ್ಕಾರ ಮಾಡಲಾಯಿತು. ಕಳೆದ ವರ್ಷ ವಿದ್ಯುತ್ ಸ್ಪರ್ಷದಿಂದ ಇದೇ ಕಾಡಿನಲ್ಲಿ ಆನೆಯೊಂದು ಸಾವನ್ನಪ್ಪಿತ್ತು. ಇದೀಗ ಮತ್ತೊಂದು ಕಾಡಾನೆ ಸಾವನ್ನಪ್ಪಿದೆ. ಕಾಡಾನೆಗಳ ಸಾವು ಈ ಭಾಗದಲ್ಲಿ ಪರಿಸರಾಸಕ್ತರಲ್ಲಿ ಆತಂಕ ಮೂಡಿಸಿದ್ದು ವನ್ಯಜೀವಿ ಇಲಾಖೆ ಈ ಕುರಿತು ಸಮಗ್ರ ಪರೀಶೀಲನೆಯೊಂದಿಗೆ ಕಾಡಾನೆಗಳ ರಕ್ಷಣೆಗೆ ಕ್ರಮ ಜರುಗಿಸಬೇಕೆಂದು ಆಗ್ರಹಿಸಲಾಗಿದೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 