ಸಕ್ರಿಯ ರಾಜಕಾರಣದಲ್ಲಿ ಮುಂದುವರಿಕೆ, ಚುನಾವಣೆಗೆ ಸ್ಪರ್ದಿಸಲ್ಲ : ಸಚಿವ ಯತೀಂದ್ರ ಸಿದ್ದರಾಮಯ್ಯ
Will continue in active politics, will not contest elections: Minister Yathindra Siddaramaiah
ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿರುವುದನ್ನು ಚುನಾವಣಾ ರಾಜಕೀಯದಿಂದ ನಿವೃತ್ತಿ ಎಂದು ಅರ್ಥೈಸಬಾರದು ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಸಚಿವರಾದ ಬಳಿಕ ಬೆಳಗಾವಿಗೆ ಮೊದಲ ಭಾರಿ ಆಗಮಿಸಿದ ಅವರು, ಮಂಗಳವಾರ ನಗರದ ಸರ್ಕಿಟ್ ಸೌಟ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯನವರು ಮುಂದಿನ ಚುನಾವಣೆಗೆ ಸ್ಪರ್ಧಿಸದೇ ಇರಬಹುದು. ಆದರೆ, ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ದುರ್ಬಲರು ಹಾಗೂ ಶೋಷಿತರ ಪರವಾಗಿ ಧ್ವನಿ ಎತ್ತುವ ಕೆಲಸವನ್ನು ಮುಂದುವರಿಸಲಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಅವರು ಖಂಡಿತವಾಗಿ ಪ್ರಚಾರ ನಡೆಸಲಿದ್ದಾರೆ," ಎಂದು ಹೇಳಿದರು.*ಸಂಪುಟ ವಿಸ್ತರಣೆ ಬಗ್ಗೆ ಮಾತು ಮತ್ತು ನಗರಾಭಿವೃದ್ಧಿ ಪರೀಶೀಲನೆ:*ಸಂಪುಟ ವಿಸ್ತರಣೆಯ ಕುರಿತು ಪ್ರತಿಕ್ರಿಯಿಸಿದ ಅವರು, "ಹೈಕಮಾಂಡ್ ಮುಖ್ಯಮಂತ್ರಿಯವರನ್ನು ದೆಹಲಿಗೆ ಕರೆದಿದ್ದು, ಚರ್ಚೆಯ ನಂತರ ಸೂಕ್ತ ತೀರ್ಮಾನ ಕೈಗೊಂಡು ಸಂಪುಟ ವಿಸ್ತರಣೆ ಮಾಡಲಾಗುವುದು," ಎಂದರು.
ನಗರಾಭಿವೃದ್ಧಿ ಇಲಾಖೆಯ ಪ್ರಗತಿ ಪರೀಶೀಲನೆಗಾಗಿ ಬೆಳಗಾವಿಗೆ ಆಗಮಿಸಿದ್ದು, ಮಹಾನಗರ ಪಾಲಿಕೆ ಹಾಗೂ ಬೆಳಗಾವಿ ನಗರಾಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ತಿಳಿಸಿದರು.* ರಸ್ತೆ ದುರಸ್ತಿಗೆ ಅನುದಾನ *ಬೆಳಗಾವಿ ಮಹಾನಗರ ಪಾಲಿಕೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನ ಸ್ಥಗಿತಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರೀಶೀಲಿಸುವುದಾಗಿ ತಿಳಿಸಿದ ಅವರು, ಚುನಾಯಿತ ಪ್ರತಿನಿಧಿಗಳ ಆಡಳಿತವಿಲ್ಲದ ಸ್ಥಳಗಳಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅನುದಾನ ಬರುತ್ತದೆ ಎಂದರು.ಸ್ಮಾರ್ಟ್ ಸಿಟಿ ಯೋಜನೆಯಡಿ ಎಲ್ ಆಂಡ್ ಟಿ ಕಂಪನಿಯು 24ಸ7 ಕುಡಿಯುವ ನೀರಿನ ಯೋಜನೆಗಾಗಿ ರಸ್ತೆಗಳನ್ನು ಅಗೆದು ಸಾರ್ವಜನಿಕರಿಗೆ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, "ರಸ್ತೆಗಳನ್ನು ಅಗೆದವರೇ ಅವುಗಳನ್ನು ಸಮರ್ಕವಾಗಿ ದುರಸ್ತಿ ಮಾಡಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡಲಾಗುವುದು," ಎಂದು ಭರವಸೆ ನೀಡಿದರು. ಅಲ್ಲದೆ, ಜಿಲ್ಲೆಯ ಅಗತ್ಯಗಳನ್ನು ಪರೀಶೀಲಿಸಿ ರಾಜ್ಯ ಸರ್ಕಾರದಿಂದ ಅಗತ್ಯ ಅಭಿವೃದ್ಧಿ ನೆರವು ದೊರಕಿಸಲು ಶ್ರಮಿಸುವುದಾಗಿ ತಿಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 