ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ-ಕ್ರೀಡಾ ಮನೋಭಾವ ಬೆಳೆಸಿಕೊಳ್ಳಿ
Winning and losing are part of sports—cultivate a sportsmanlike spirit
ಲೋಕದರ್ಶನ ವರದಿ
ಹಾವೇರಿ 01: ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ, ಗೆಲುವು ಸಾಧಿಸಿದವರು ಮುಂದಿನ ಹಂತದ ಸ್ಪರ್ಧೆಗಳಿಗೆ ಸಿದ್ಧರಾಗಬೇಕು. ಸೋತವರು ನಿರಾಶರಾಗದೆ ಮುಂದಿನ ಬಾರಿ ಗೆಲುವು ಸಾಧಿಸಲು ಪ್ರಯತ್ನಿಸಬೇಕು ಎಂದು ಸಕ್ಕರೆ ಮತ್ತು ಜವಳಿ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ರುದ್ರ್ಪ ಮಾನಪ್ಪ ಲಮಾಣಿ ಹೇಳಿದರು.
ನಗರದ ಹೊಸಮನಿ ಸಿದ್ದಪ್ಪ ಜಿಲ್ಲಾ ಕ್ರೀಡಾಗಂಣದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತ, ತಾಲೂಕು ಪಂಚಾಯಿತ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಹಾವೇರಿ ಪಶ್ಚಿಮ ಸಮೂಹ ಸಂಪನ್ಮೂಲ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ 2026-27ನೇ ಸಾಲಿನ ಹಾವೇರಿ ಪಶ್ಚಿಮ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾ ಮನೋಭಾವದಿಂದ ಸ್ಪರ್ಧಿಸಬೇಕು. ಆಟದ ಸಂದರ್ಭದಲ್ಲಿ ಅಂಪೈರ್‌ಗಳು ನೀಡುವ ತೀರ್ಪನನು ಗೌರವಿಸಿ, ಎಲ್ಲರೂ ಪರಸ್ಪರ ಸಹಕಾರದಿಂದ ಕ್ರೀಡಾಕೂಟವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.
ಹಾವೇರಿ ನಗರದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ರೂ.10 ಕೋಟಿ ವೆಚ್ಚದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸಜ್ಜಾಗಿದ್ದು, ಮುಂದಿನ ದಿನಗಳಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣವಾಗಲಿದೆ. ಇದರಿಂದ ಶಾಲಾ ಮಕ್ಕಳಿಗೆ ಕ್ರೀಡಾಭ್ಯಾಸ ಹಾಗೂ ಸ್ಪರ್ಧೆಗಳಿಗೆ ಹೆಚ್ಚಿನ ಅವಕಾಶ ದೊರೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರು, ಎಸ್‌ಡಿಎಂಸಿ ಅಧ್ಯಕ್ಷ ಖಾಜಾ ಮೈನುದ್ದೀನ್ ಸುಂಕದ್, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀನಿವಾಸ್ ಬಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪರಮೇಶ್ವರ ಹುಬ್ಬಳ್ಳಿ, ಸಂಜೀವಕುಮಾರ ನೀರಲಗಿ, ಶಿಕ್ಷಣ ಸಂಯೋಜಕ ಎಸ್.ಆರ್. ಹಿರೇಮಠ, ಶಿಕ್ಷಕ ರಿಯಾಜ್ ಅಹಮದ್ ಸುಂಗೊಳ್ಳಿ ಸೇರಿದಂತೆ ಶಿಕ್ಷಕರು, ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 