ಬೆಳಗಾವಿಯಲ್ಲಿ ಡಿ. 9ರಿಂದ ಚಳಿಗಾಲದ ಅಧಿವೇಶನ : ಸ್ಪೀಕರ್ ಯು ಟಿ ಖಾದರ್

ಬೆಳಗಾವಿ : ಬರುವ ಡಿ. 9ರಿಂದ 20ರ ವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯಲು ತಿರ್ಮಾನಿಸಲಾಗಿದೆ ಎಂದು ವಿಧಾನ ಸಭಾ ಸ್ಪೀಕರ್ ಯು.ಟಿ ಖಾದರ್, ವಿಪ ಸಭಾಪತಿ ಬಸವರಾಜ ಹೊರಟ್ಟಿ ಅವರು ಇಂದಿಲ್ಲಿ ಹೇಳಿದರು. 

     ಸುವರ್ಣ ಸೌಧದಲ್ಲಿ ಶುಕ್ರವಾರ ಮಧ್ಯಾಹ್ನ ಕರೆಯಲಾದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ಬಾರಿ ಕೂಡಾ ವಿಧಾನ ಸಭೆ ಕಲಾಪಗಳು ಸುಗಮವಾಗಿ ನಡೆಸಲು ಎಲ್ಲ ರೀತಿಯ ಸಿದ್ದತೆ ಮಾಡಿಕೊಳ್ಳುವಂತೆ ಬೆಳಗಾವಿ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

    ಬರುವ ಡಿ. 9 ರಿಂದ 20 ರ ವರೆಗೆ 10 ದಿನಗಳ‌ ಕಾಲ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನವನ್ನು ನಡೆಸಲು ಸರಕಾರ ನಿರ್ಣಯ ಮಾಡಿದೆ. ಈ ದಿನಾಂಕದ ಕುರಿತು ಸಚಿವ ಸಂಪುಟವು ತಿರ್ಮಾಣ ಮಾಡಲಿದೆ ಎಂದು ತಿಳಿಸಿದರು. 

    ಇದಕ್ಕು ಮೊದಲು ವಿಧಾನ ಸಭೆ ಸ್ಪೀಕರ್ ಯು.ಟಿ ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನ ಸಭೆಯ ಸಭಾಂಗಣದಲ್ಲಿ ತಯಾರಿಯ ಕುರಿತು ವೀಕ್ಷಣೆ ನಡೆಸಿದರು.

  ಈ ಸಂದರ್ಭದಲ್ಲಿ ಶಾಸಕ ರಾಜು ಶೇಠ್, ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ, ನಗರ ಪೊಲೀಸ ಉಪ ಆಯುಕ್ತ ಜಗದೀಶ ರೋಹನ, ಜಿಪಂ ಸಿಇಒ ರಾಹುಲ್ ಶಿಂಧೆ, ಮಹಾನಗರ ಪಾಲಿಕೆಯ ಆಯುಕ್ತ ಅಶೋಕ ದುಡಗುಂಟಿ ಸೇರಿದಂತೆ ಅನೇಕರ ಅಧಿಕಾರಿಗಳು ಉಪಸ್ಥಿತರಿದ್ದರು.