ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗಿದೆ : ಈಶ್ವರ ಕುಮಾರ್ ಕಾಂದೂ

ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಹಕಾರದಿಂದ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಸಾಧ್ಯವಾಗಿದೆ : ಈಶ್ವರ ಕುಮಾರ್ ಕಾಂದೂ With the cooperation of officers and staff, it has been possible to carry out development works in t

ಕಾರವಾರ 15: ಉತ್ತರ ಕನ್ನಡ ಜಿಲ್ಲೆಯಲ್ಲಿನ ಎರಡೂವರೆ ವರ್ಷದ ಸೇವೆಯಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ಎಲ್ಲಾ ಅಧಿಕಾರಿ ಸಿಬ್ಬಂದಿಗಳ ಪರಿಶ್ರಮ ಮತ್ತು ಸಹಕಾರದಿಂದ ಅನೇಕ ಅಭಿವೃದ್ಧಿ ಕಾರ್ಯಗಳು ಮಾಡಲು ಸಾಧ್ಯವಾಗಿದೆ ಎಂದು ನಿರ್ಗಮಿತ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕುಮಾರ್ ಕಾಂದೂ ಹೇಳಿದರು.

ಅವರು ಸೋಮವಾರ ಜಿಲ್ಲಾ ಪಂಚಾಯತ ವತಿಯಿಂದ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮ ಮತ್ತು ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಷ್ಠಾನಕ್ಕೆ ಸಾಕಷ್ಟು ಸಮಸ್ಯೆಗಳು ಎದುರಾದಾಗ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಅವರ ಸಹಕಾರದಿಂದ ಬಹುಗ್ರಾಮ ಕುಡಿಯುವ ನೀರು ಯೋಜನೆ ಕಾಮಗಾರಿಗಳನ್ನು ಪ್ರಾರಂಭಿಸಲಾಗಿದೆ. ಜಿಲ್ಲೆಯು ಶೇ.80 ರಷ್ಟು ಅರಣ್ಯ ಭೂಮಿ ಹೊಂದಿರುವದರಿಂದ ಅರಣ್ಯ ಇಲಾಖೆಯ ಸಹಕಾರವು ಸಕಾಲದಲ್ಲಿ ದೊರೆತಿರುವುದರಿಂದ ಜಿಲ್ಲಾ ಪಂಚಾಯತಿಯ ಕಾಮಗಾರಿಗಳನ್ನು ಸುಗಮವಾಗಿ ಜಾರಿಗೊಳಿಸಲು ಸಹಕಾರವಾಯಿತು ಎಂದರು.ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರ ಸಹಕಾರದಿಂದ ಸ್ವೀಪ್ ಕಾರ್ಯಕ್ರಮದಲ್ಲಿ ರಾಜ್ಯ ಪ್ರಶಸ್ತಿ ಸಿಕ್ಕಿದೆ. 

ಇದು ಕೇವಲ ನನ್ನೊಬ್ಬನ ಪರಶ್ರಮವಲ್ಲ.. ಎಲ್ಲಾ ಅಧಿಕಾರಿ ಸಿಬ್ಬಂದಿಗಳ ಒಗ್ಗಟಿನ ಪರಿಶ್ರಮದಿಂದ ಆದರಿಂದ ಈ ಪ್ರಶಸ್ತಿಗೆ ಎಲ್ಲರೂ ಕಾರಣೀಭೂತರಾಗಿದ್ದು, ಎಲ್ಲರಿಗೂ ಧನ್ಯವಾದ ಎಂದರು.ರಾಜ್ಯದಲ್ಲಿ ತೆರಿಗೆ ಸಂಗ್ರಹದಲ್ಲಿ ಪ್ರಥಮ ಸ್ಥಾನ ಪಡೆಯುವಲ್ಲಿ ಗ್ರಾಮ ಪಂಚಾಯತಿ ಅಧಿಕಾರಿ ಸಿಬ್ಬಂದಿಗಳ ಪರಿಶ್ರಮ ಕಾರಣವಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ 2 ಶೈಕ್ಷಣಿಕ ಕ್ಷೇತ್ರಗಳು ಉತ್ತಮ ಸಾಧನೆ ಮಾಡಿದೆ. ಈ ಸಾಧನೆಯನ್ನು ಇದೇ ರೀತಿ ಮುಂದುವರೆಸುವಂತೆ ತಿಳಿಸಿದರು.ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಾತನಾಡಿ, ಸೀಮಿತ ಅಧಿಕಾರಿ ಸಿಬ್ಬಂದಿಗಳನ್ನು ಉಪಯೋಗಿಸಿಕೊಂಡು ರಾಜ್ಯಮಟ್ಟದ ಪ್ರಶಸ್ತಿ ಪಡೆಯುವುದು ಸಾಮಾನ್ಯವಾದದಲ್ಲ ಇದನ್ನು ಮಾಡಿ ಜಿಲ್ಲೆಗೆ ಹೆಸರು ತಂದಿರುವುದಕ್ಕೆ ಈಶ್ವರ ಕುಮಾರ್ ಕಾಂದೂ ಅವರಿಗೆ ಅಭಿನಂದನೆಗಳು. ಡಮಾಮಿ ಪ್ರವಾಸೋದ್ಯಮ ಮೂಲಕ ಸ್ವಸಹಾಯ ಗುಂಪಿನ ಮಹಿಳೆಯರಿಂದ ನಿರ್ವಹಿಸುವ ವಿನೂತನ ಕಾರ್ಯಕ್ರಮಕ್ಕೆ ರಾಷ್ಟ್ರಮಟ್ಟದ ಸ್ಕಾಚ್ ಪ್ರಶಸ್ತಿ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ಚೆಸ್ ಪಾರ್ಕ್‌ ಮತ್ತು ಅಕ್ಕಾ ಕೆಫೆ ಯೋಜನೆಯ ಕುರಿತು ಸಾಕಷ್ಟು ಶ್ರಮವಹಿಸಿ, ಫಾಲೋಅಪ್ ಮಾಡುವ ಮೂಲಕ ಅವುಗಳನ್ನು ಅನುಷ್ಠಾನ ಮಾಡಿದ್ದಾರೆ. ಪಂಚಾಯತ್ ರಾಜ್ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಯಾವುದೇ ಯೋಜನೆಗಳ ಅನುಷ್ಠಾನ ಅಥವಾ ಮಾಹಿತಿ ಪಡೆಯುವ ಸಂಬಂಧ ಉತ್ತರ ಕನ್ನಡ ಜಿಲ್ಲೆಯ ಸಿಇಓ ಅವರಿಂದ ಪಡೆಯುವಂತೆ ಸೂಚನೆ ನೀಡುತ್ತಿದ್ದರು. ಅಂದರೆ ಇವರ ಕಾರ್ಯಕ್ಷಮತೆಯನ್ನು ಹಿರಿಯ ಅಧಿಕಾರಿಗಳು ಗುರುತಿಸುವಂತಹ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿನ ಕೆಲವು ಕ್ಲಿಷ್ಠಕರ ಪರಿಸ್ಥಿತಿಯಲ್ಲಿ ನನಗೆ ಸಹೋದರನ ರೀತಿ ಧೈರ್ಯ ತುಂಬಿ ಮನೋಸ್ಥೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಅವರ ಮುಂದಿನ ಸೇವಾ ಜೀವನ ಉತ್ತಮವಾಗಿರಲಿ ಎಂದರು.ಜಿಲ್ಲಾ ಪಂಚಾಯತ್ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ದೀಲೀಷ್ ಶಶಿ ಮಾತನಾಡಿ, ಜಿಲ್ಲೆಯ ಅಧಿಕಾರ ವಹಿಸಿಕೊಂಡು ಶಿಷ್ಠಾಚಾರದಂತೆ ಎಲ್ಲರನ್ನು ಸಂಪರ್ಕಿಸಿದಾಗ ಎಲ್ಲರೂ ಹೇಳಿದ್ದು ಒಂದೇ ಮಾತು.. 

ಈಶ್ವರ್ ಕಾಂದೂ ಅಡಿಪಾಯ ಹಾಕಿದ್ದಾರೆ. ನೀವೂ ಮುಂದುವರೆಸಿಕೊಂಡು ಹೋಗಿ ಅಂತ.. ಈಶ್ವರ ಕಾಂದೂ ಫ್ಯಾಶನ್‌ನಿಂದ ಕಾರ್ಯನಿರ್ವಹಿಸಿ, ಪ್ರೀತಿಯಿಂದ ಕೆಲಸವನ್ನು ಪಡೆಯುವ ಗುಣವನ್ನು ಹೊಂದಿದ್ದಾರೆ, ಅವರಿಗೆ ನೀಡಿರುವ ಪ್ರೀತಿ, ಸಹಕಾರವನ್ನು ತಮಗೂ ನೀಡುವಂತೆ ಮತ್ತು ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡುವಂತೆ ತಿಳಿಸಿದರು.ಕಾರ್ಯಕ್ರಮದಲ್ಲಿ ಪ್ರೋಬೇಷನರಿ ಐಎಎಸ್ ಅಧಿಕಾರಿ ಝುಪಿಶಾನ್ ಹಕ್, ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿ ಆನಂದಸಾ ಹಬೀಬ್, ಮುಖ್ಯ ಯೋಜನಾಧಿಕಾರಿ ಸೋಮಶೇಖರ ಮೇಸ್ತಾ, ಯೋಜನಾ ನಿರ್ದೇಶಕ ಕರೀಂ ಆಸಾದಿ, ನಿವೃತ್ತ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ್, ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಿಬ್ಬಂದಿಗಳು ಇದ್ದರು......