ಕೋವಿಡ್-19 ಸೋಂಕಿನಿಂದ ಮಹಿಳೆ ಗುಣಮುಖ ಆಸ್ಪತ್ರೆಯಿಂದ ಡಿಸ್ಚಾಜ್೯
ವಿಜಯಪುರ ಮೇ.30 : ಕೋವಿಡ್ -19 ದಿಂದ ಗುಣಮುಖರಾದ ಓರ್ವ ಮಹಿಳೆ ರೋಗಿ ಸಂಖ್ಯೆ 2136 (28 ವರ್ಷ ಮಹಿಳೆ) ಅವರು ಇಂದು ಜಿಲ್ಲಾಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ ಜಿಲ್ಲೆಯ 55 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 96 ಕೋವಿಡ್-19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಜಿಲ್ಲಾಸ್ಪತ್ರೆಯಲ್ಲಿ 36 ರೋಗಿಗಳು ಕೋವಿಡ್-19 ಪಾಸಿಟಿವ್ ಸಕ್ರಿಯ ರೋಗಿಗಳಾಗಿದ್ದಾರೆ. ಇಂದು 11 ಜನರಿಗೆ ಕೋವಿಡ್-19 ಸೋಂಕು ತಗುಲಿದ್ದು, ಮಹಾರಾಷ್ಟ್ರದ ಸಂಪರ್ಕದಿಂದ ಸೋಂಕು ತಗುಲಿರುವ ಬಗ್ಗೆ ದೃಢಪಟ್ಟಿದೆ.
ಅದರಂತೆ ರೋಗಿ ಸಂಖ್ಯೆ 2784 (32 ವರ್ಷ - ಪುರುಷ), ರೋಗಿ ಸಂಖ್ಯೆ 2835 (28 ವರ್ಷ - ಪುರುಷ), ರೋಗಿ ಸಂಖ್ಯೆ 2836 (20 ವರ್ಷ ಯುವಕ), ರೋಗಿ ಸಂಖ್ಯೆ 2837 (35 ವರ್ಷ ಪುರುಷ), ರೋಗಿ ಸಂಖ್ಯೆ 2838 (30 ವರ್ಷ ಮಹಿಳೆ), ರೋಗಿ ಸಂಖ್ಯೆ 2839 (37 ವರ್ಷ ಮಹಿಳೆ), ರೋಗಿ ಸಂಖ್ಯೆ 2840 (14 ವರ್ಷ ಬಾಲಕಿ), ರೋಗಿ ಸಂಖ್ಯೆ 2841 (28 ವರ್ಷ ಪುರುಷ), ರೋಗಿ ಸಂಖ್ಯೆ 2842 (35 ವರ್ಷ ಮಹಿಳೆ), ರೋಗಿ ಸಂಖ್ಯೆ 2843 (18 ವರ್ಷ ಯುವಕ), ರೋಗಿ ಸಂಖ್ಯೆ 2844 (15 ವರ್ಷ ಬಾಲಕ) ಇವರಿಗೆ ಕೋವಿಡ್-19 ಸೋಂಕು ತಗುಲಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 27383 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. ಒಟ್ಟು 96 ಕೋವಿಡ್ -19 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದಾರೆ. 6828 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 20496 ಜನರು (1 ರಿಂದ 28 ದಿನಗಳ) ರಿಪೋಟರ್ಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 5 ಜನ ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ. 55 ಜನರು ಕೋವಿಡ್-19 ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 36 ಜನರು ಆಸ್ಪತ್ರೆಯಲ್ಲಿರುವ ಕೋವಿಡ್-19 ಸಕ್ರಿಯ ರೋಗಿಗಳಾಗಿದ್ದಾರೆ. ಈವರೆಗೆ 24511 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 14263 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 10152 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 