ರಸ್ತೆ ಡಿಕ್ಕಿ ಓರ್ವ ಮಹಿಳೆ ಸಾವು, ಮೂವರಿಗೆ ಗಾಯ
Woman dies, three injured in road accident
ಬಳ್ಳಾರಿ. ಸೆ. 28: ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಅತೀವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ದಾಟುತಿದ್ದ ನಾಲ್ವರಿಗೆ ಡಿಕ್ಕಿ ಹೊಡೆದ ಪರಿಣಾಮ, ಮಹಾದೇವಿ(48) ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅಪಘಾತದಲ್ಲಿ ಸೋಮಸಮುದ್ರ ಗ್ರಾಮದ ಸುನಿತಾ, ಗಗನ್ ಹಾಗೂ ಪೂಜಾರಿ ಜಡೇಮ್ಮ ಗಾಯಗೊಂಡಿದ್ದು, ಅವರನ್ನು ಬಳ್ಳಾರಿಯ ಟ್ರಾಮಾಕೇರ್ ಸೆಂಟರ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಲಾರಿ ಅತೀವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ.ಘಟನೆ ಸಂಬಂಧ ಕುರುಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಐವರು ಪೋಲಿಸರಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ನಾಗರಿಕರ ಪ್ರತಿಭಟನೆ, ನೀಲಗಾರ ಗಣಪತಿ ದರ್ಶನ ರದ್ದು
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ 