ಕಾರು ಹರಿದು ಮಹಿಳೆಯರಿಬ್ಬರ ಸಾವು
ಬೆಳಗಾವಿ, ಮೇ 25, ಕಾರು ಹರಿದು ಮಹಿಳೆಯರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಾರಿಹಾಲ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಥಗಾ ಗ್ರಾಮದ ಬಳಿ ನಡೆದಿದೆ.ಅಪಘಾತ ಸಂಭವಿಸಿದಾಗ ಸಂತ್ರಸ್ತ ಮಹಿಳೆಯರು ನಿನ್ನೆ ರಾತ್ರಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಅವರ ಮೇಲೆ ಹರಿದಿದೆ ಎಂದು ಪೊಲೀಸರು ಹೇಳಿದ್ದಾರೆ.ಮೃತರನ್ನು ಸವಿತಾ ಪಾಟೀಲ್ (43) ಮತ್ತು ವಿದ್ಯಾ ಪಾಟೀಲ್ (54) ಎಂದು ಗುರುತಿಸಲಾಗಿದೆ.ಘಟನೆಯಲ್ಲಿ ಗಾಯಗೊಂಡಿರುವ ಪಾದಚಾರಿ ಶಾಂತಾ ಚೌಗಲ್ ಮತ್ತು ಕಾರು ಚಾಲಕನನ್ನು ಆಸ್ಪತ್ರೆಗೆ ಸಾಗಿಸಿದ್ದು, ಮಾರಿಹಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 