ಇಂಡಿಯಲ್ಲಿ ಹಾಡುಹಗಲೇ ಮಹಿಳೆ ಕೊಲೆ
Woman murdered in broad daylight in Indi
ಇಂಡಿ 11: ನಗರದ ಬಸ್ಸ ನಿಲ್ದಾಣ ಬಳಿ ಇರುವ ಟಿಪ್ಪುಸುಲ್ತಾನ್ ವೃತ್ತದ ಬಳಿ ಬೆಳಿಗ್ಗೆ 06-00 ಸುಮಾರಿಗೆ ಮಹಿಳೆಯನ್ನು ಯುವಕನೊಬ್ಬ ಚಾಕುವಿನಿಂದ ನಾಲ್ಕು ಬಾರಿ ಇರಿದು ಕೊಚ್ಚಿ ಕೊಲೆ ಮಾಡಿದ್ದಾನೆ.
ಮೃತ ಮಹಿಳೆ ಇಂಡಿ ತಾಲ್ಲೂಕಿನ ಕಟ್ನಾಳ ಗ್ರಾಮದ ರೇಖಾ ಕನ್ನೊಳ್ಳಿ, ವಯಾ 32 ಎಂದು ತಿಳಿದುಬಂದಿದೆ. ಮೃತ ಮಹಿಳೆ ಇಂಡಿ ಸಮಾಜ ಕಲ್ಯಾಣ ಇಲಾಖೆ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೊಲೆ ಮಾಡಿದ ಯುವಕ ಸಂಜು ಬನಸೋಡೆ ಎಂದು ತಿಳಿದು ಬಂದಿದೆ.
ಈ ಕೊಲೆ ಅನೈತಿಕ ಸಂಬಂಧದಿಂದ ಆಗಿದೆ ಅಥವಾ ಬೇರೆ ಯಾವುದಾದರೂ ಕಾರಣದಿಂದ ಆಗಿದೆ ಎಂಬುದನ್ನು ಪೋಲಿಸರ ತನಿಖೆಯಿಂದ ಗೊತ್ತಾಗಬೇಕಾಗಿದೆ. ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ. ಈ ಕುರಿತು ಇಂಡಿ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 