ಬೆಂಗಳೂರು 06: ಕರ್ನಾಟಕ ತಂಡವು ಸೋಮವಾರ ಬಿಸಿಸಿಐ 23 ವರ್ಷದೊಳಗಿನ ಮಹಿಳೆಯರ ಟಿ20 ಟ್ರೋಫಿ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಛತ್ತೀಸಗಢ ತಂಡವನ್ನು 2 ವಿಕೆಟ್ಗಳಿಂದ ಸೋಲಿಸಿತು.
ಕಟಕ್ನ ಎಂಜಿಎಂ ಸ್ಕೂಲ್ ಆಫ್ ಸ್ಪೋರ್ಟ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಛತ್ತೀಸಗಢ ತಂಡವು ಐಶ್ವರ್ಯಾ ಸಿಂಗ್ ಅವರ ಅರ್ಧಶತಕದ ಬಲದಿಂದ 20 ಓವರ್ಗಳಲ್ಲಿ 4 ವಿಕೆಟ್ಗೆ 116 ರನ್ ಗಳಿಸಿತು. ಸಲೋನಿ ಎರಡು ವಿಕೆಟ್ ಪಡೆದರು.
ಗುರಿಯನ್ನು ಬೆನ್ನತ್ತಿದ ಕರ್ನಾಟಕ ತಂಡವು ನಾಲ್ಕು ಎಸೆತಗಳು ಬಾಕಿ ಇರುವಂತೆ 8 ವಿಕೆಟ್ಗೆ 117 ರನ್ ಗಳಿಸಿ ಜಯ ಸಾಧಿಸಿತು. ಸಲೋನಿ ಪಿ. ಔಟಾಗದೇ 24 ರನ್ ಗಳಿಸಿದರು.