ಖೇಲೋ ಇಂಡಿಯಾಗೆ ಮಹಿಳಾ ವಿವಿಯ ಸಮುದ್ರ ತೀರದ ಚಂಡಾಟ ತಂಡ ಆಯ್ಕೆ
Women's University Beach Volleyball Team Selected for Khelo India
ವಿಜಯಪುರ 25: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ “ಸಮುದ್ರ ತೀರದ ಚಂಡಾಟ” ಕ್ರೀಡಾಪಟುಗಳ ತಂಡವು 2025ಹಿ26 ನೇ ಸಾಲಿನ ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್‌ಗೆ ಆಯ್ಕೆಯಾಗಿದ್ದು, ಇದೇ ನ, 28 ರಿಂದ ಡಿ, 02 ರವರೆಗೆ ರಾಜಸ್ಥಾನದ ಉದಯಪುರದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ.
ವಿಶ್ವವಿದ್ಯಾನಿಲಯದ ಸಮುದ್ರ ತೀರದ ಚಂಡಾಟ ಕ್ರೀಡಾಪಟುಗಳು ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿ ತಂಡಗಳೊಂದಿಗೆ ಪೈಪೋಟಿ ನಡೆಸಲಿದ್ದು, ತಂಡದ ತರಬೇತಿದಾರರಾಗಿ ಕುಮಾರಿ ಜಬಿನ್ ತಾಜ್ ಜಿಗಳೂರ ನೇತೃತ್ವ ವಹಿಸಲಿದ್ದಾರೆ.
ಚಂಡಾಟ ತಂಡಕ್ಕೆ, ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಬಿ.ಎಲ್. ಲಕ್ಕಣ್ಣವರ, ಹಾಗೂ ಕ್ರೀಡಾ ನಿರ್ದೇಶಕ ಪ್ರೊ. ಹನುಮಂತಯ್ಯ ಪೂಜಾರಿ, ಸಹಾಯಕ ನಿರ್ದೇಶಕ ಡಾ. ವಿಶ್ವನಾಥ ಎಮ್. ನಡಕಟ್ಟಿ, ಶುಭ ಹಾರೈಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 