ವಿಜಯಪುರದ ಮಹಿಳಾ ವಿವಿ ಮತ್ತು ಮುಂಬೈನ ಎಸ್ಎನ್ಡಿಟಿ ಮಹಿಳಾ ಶೀಘ್ರದಲ್ಲೇ ಶೈಕ್ಷಣಿಕ ಸಹಕಾರ ಒಪ್ಪಂದ
Women's University in Vijayapura and SNDT Women's University in Mumbai to sign an academic cooperati
ವಿಜಯಪ್ಯರ 07: ಇಲ್ಲಿಯ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ವಿಜಯಾ ಬಿ. ಕೋರಿಶೆಟ್ಟಿ ಅವರ ನೇತೃತ್ವದ ನಿಯೋಗವು ಆಗಸ್ಟ್ 4 ಮತ್ತು 5ರಂದು ದೇಶದ ್ರ್ರಥಮ ಮಹಿಳಾ ವಿಶ್ವವಿದ್ಯಾನಿಲಯವಾಗಿರುವ ಮುಂಬೈನ ಎಸ್ಎನ್ಡಿಟಿ ಮಹಿಳಾ ವಿಶ್ವವಿದ್ಯಾಲಯದ ಚರ್ಚ್ಗೇಟ್ ಹಾಗೂ ಜುಹು ಆವರಣಗಳಿಗೆ ಭೇಟಿ ನೀಡಿ, ಶೈಕ್ಷಣಿಕ ಹಾಗೂ ಸಂಶೋಧನಾ ಸಹಕಾರದ ಕುರಿತು ಮಹತ್ವದ ಚರ್ಚೆ ನಡೆಸಿತು.
ಎಸ್ಎನ್ಡಿಟಿ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಉಜ್ವಲಾ ಚಕ್ರದೇವ್ ಅವರು ನಿಯೋಗವನ್ನು ಸ್ವಾಗತಿಸಿ, ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಉನ್ನತ ಶಿಕ್ಷಣ, ಸಂಶೋಧನೆ, ನವೋದ್ಯಮ, ಕೌಶಲ್ಯಾಭಿವೃದ್ಧಿ ಮತ್ತು ವಿದ್ಯಾರ್ಥಿ-ಕೇಂದ್ರಿತ ಚಟುವಟಿಕೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ವಿಜಯಪುರ ಮಹಿಳಾ ವಿವಿಯ ಈ ನಿಯೋಗದಲ್ಲಿ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ.ಪಿ.ಜಿ.ತಡಸದ, ಕಂಪ್ಯೂಟರ್ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಜಿ.ರಜಪೂತ, ಸಮಾಜಕಾರ್ಯ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಬಿ. ಸೋನಾರ್ ಹಾಗೂ ಆಹಾರ ಸಂಸ್ಕರಣೆ ಮತ್ತು ಪೋಷಣೆ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಜೆನ್ನಿಫರ್ ಸೌಲಮ್ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 