ಜಾಗತಿಕ ಮಟ್ಟದಲ್ಲಿ ಮಹಿಳೆ ಸಾಧನೆ ನಾರಿ ಶಕ್ತಿಗೆ ಸಾಕ್ಷಿ: ಸಾರಂಗ ಮಠದ
Women's achievements on a global scale are proof of women's power: Sarangamath
ದೇವರಹಿಪ್ಪರಗಿ 30: :ಮಹಿಳೆಯರು ಇಂದು ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಹೊಂದಿದ್ದು, ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡುತ್ತಿರುವುದು ನಾರಿ ಶಕ್ತಿಗೆ ಸಾಕ್ಷಿಯಾಗಿದೆ ಎಂದು ಸಿಂದಗಿ ಸಾರಂಗ ಮಠದ ಶ್ರೀ ಷ.ಬ್ರ ಡಾ.ಪ್ರಭು ಸಾರಂಗದೇವ ಶಿವಾಚಾರ್ಯರು ಹೇಳಿದರು.
ತಾಲೂಕಿನ ಕೋರವಾರ ಗ್ರಾಮದ ಶ್ರೀ ಮಹಾಂತೇಶ್ವರ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಶಿವಯೋಗಿ ಸಿದ್ರಾಮೇಶ್ವರ ಪುರಾಣ, ಕ್ರಾರ್ಯಕ್ರಮ ಹಾಗೂ ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು,ನಾಲ್ಕು ಗೋಡೆಗಳಿಂದ ಹೊರಬಂದು ಸಮಾಜದ ಮುಖ್ಯವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯರು ಇಂದು ಪುರುಷ ಪ್ರಧಾನ ಸಮಾಜದಲ್ಲಿ ಮೇಲುಗೈ ಸಾಧಿಸುತ್ತಿದ್ದಾರೆ. ರಾಜಕೀಯ, ಕ್ರೀಡೆ, ಸಾಹಿತ್ಯ, ಕಲೆ, ಸಾಂಸ್ಕೃತಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿರುವ ಮಹಿಳೆಯರು ಪುರುಷರಿಗೆ ಸವಾಲೊಡ್ಡಿ ಆರ್ಥಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಮುನ್ನಡೆಯುತ್ತಿದ್ದಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ಥಳೀಯ ಶಾಸಕರ ಧರ್ಮಪತ್ನಿಯಾದ ಜಯಶ್ರೀ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಅವರು ಮಾತನಾಡಿ,’ಪುರಾಣ ಕಾರ್ಯಕ್ರಮದಲ್ಲಿ ನೂರಾರು ಮುತ್ತೈದೆ ಮಹಿಯರಿಗೆ ಉಡಿ ತುಂಬುವ ಮೂಲಕ ನಮ್ಮ ಹಳೆಯ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲು ಹಾಗೂ ಉಡಿ ತುಂಬುವ ಮಹತ್ವದ ಬಗ್ಗೆ ಮಹಿಳೆಯರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸ ಉತ್ತಮವಾಗಿದೆ’ ಎಂದು ಹೇಳಿದರು.ಕಾರ್ಯಕ್ರಮಕ್ಕೆ ಸಿಂದಗಿ ಶಾಸಕರ ಧರ್ಮಪತ್ನಿಯಾದ ನಾಗಮ್ಮ ಅಶೋಕ ಮನಗೂಳಿ ಚಾಲನೆ ನೀಡಿದರು.
ಕಾರ್ಯಕ್ರಮದ ನೇತೃತ್ವವನ್ನು ಸ್ಥಳೀಯ ಹಿರೇಮಠದ ಶ್ರೀ ಷ.ಬ್ರ.ಬಸವಲಿಂಗ ಶಿವಾಚಾರ್ಯರು ವಹಿಸಿದ್ದರು. ಸಾನಿಧ್ಯವನ್ನು ಸಗರ- ದೇವರ ಹಿಪ್ಪರಗಿ ಮಠದ ಶ್ರೀ ಷ.ಬ್ರ,ವೀರ ಮಹಾಂತ ಶಿವಾಚಾರ್ಯರು, ಯಂಕಂಚಿ ಹಿರೇಮಠದ ಶ್ರೀ ಷ.ಬ್ರ, ಅಭಿನವ ರುದ್ರಮುನಿ ಶಿವಾಚಾರ್ಯರು, ಸ್ಥಳೀಯ ಚೌಕಿಮಠದ ಶ್ರೀ ಶ್ರೋ,ಬ್ರ,ಮುರುಘೇಂದ್ರ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಿದರು. ಆಸಂಗಿ ಹಿರೇಮಠದ ಪುರಾಣ, ಪ್ರವಚನಕಾರರಾದ ಪೂಜ್ಯ ಶ್ರೀ ವೀರಬಸವದೇವರು ಪ್ರವಚನ ನಡೆಸಿ ಕೊಟ್ಟರು. ಕೊಲ್ಲಾರ ಗಾನಕೋಗಿಲೆ ಶ್ರೀ ಭಾಗೇಶ ರಾಂಪೂರ, ಗದಗ ವೀರೇಶ್ವರ ಪುಣ್ಯಶ್ರಮದ ಮಾಂತೇಶ ನರಿಬೋಳ ತಬಲ ಸೇವೆ ನೆರವೇರಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಪ್ರಮುಖರು, ರಾಜಕೀಯ ಮುಖಂಡರು,ಗಣ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಹಾ ಪ್ರಸಾದ ಸೇವೆಯನ್ನು ಶ್ರೀ ಹಿರೋಡೇಶ್ವರ ಹವ್ಯಾಸಿ ಸೇವಾ ಸಂಘದ ಬಳಗದ ವತಿಯಿಂದ ದಾಸೋಹವನ್ನು ನೆರೆವೇರಿಸಿದರು,ಫೋಟೋ 30ಡಿಎಚಪಿ3
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 